ನವದೆಹಲಿ: ಮುಸ್ಲಿಂ ಸಮುದಾಯದ ವಿವಾಹ, ವಿಚ್ಛೇದನ ಹಾಗೂ ಇತರೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲು ನಿರ್ಧರಿಸಲಾಗಿರುವ ಷರಿಯಾ ನ್ಯಾಯಾಲಯಗಳನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಮುಸ್ಲಿಂ ಮಹಿಳೆಯೊಬ್ಬರು ಸುಪ್ರೀಂ ಮೊರೆ ಹೋಗಿದ್ದಾರೆ.

ಈ ಅರ್ಜಿ ಬಗ್ಗೆ ವಿಚಾರಣೆ ನಡೆಸಿದ ನ್ಯಾ.ದೀಪಕ್‌ ಮಿಶ್ರಾ, ನ್ಯಾ.ಎ.ಎಂ ಖಾನ್ವಿಲ್ಕರ್‌ ಹಾಗೂ ಡಿ.ವೈ.ಚಂದ್ರಚೂಡ್‌ ಅವರಿದ್ದ ಪೀಠ, ನಿಖಾ ಹಲಾಲಾ ಹಾಗೂ ಬಹುಪತ್ನಿತ್ವದ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಯಲ್ಲಿ ತನ್ನನ್ನೂ ಪಾಲುದಾರೆಯನ್ನಾಗಿ ಮಾಡುವಂತೆ ಕೋರಿ ಅರ್ಜಿ ಸಲ್ಲಿಸುವಂತೆ ಅರ್ಜಿದಾರೆ ಝಿಕ್ರಾ ಎಂಬುವರಿಗೆ ಸೂಚಿಸಿದೆ.