ರಂಜಾನ್ : ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಮುಸ್ಲಿಂ ಬಾಂಧವರು

Muslims met Pejavara Shri due to Ramadan
Highlights

ರಂಜಾನ್ ಹಬ್ಬದ ಹಿನ್ನಲೆಯಲ್ಲಿ  ಮುಸ್ಲಿಂ ಬಾಂಧವರು ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ್ದಾರೆ.  ಶ್ರೀಗಳಿಗೆ ಫಲವಸ್ತು ನೀಡಿ ಗೌರವ ಸಲ್ಲಿಸಿದ್ದಾರೆ.  ಇಫ್ತಾರ್ ಕೂಟವೇ ಆಗಬೇಕಿಲ್ಲ. ಸ್ನೇಹ ಕೂಟವನ್ನು ಯಾವಾಗ ಬೇಕಾದರೂ ಮಾಡಬಹುದು. ಉತ್ತರ ಭಾರತ ಪ್ರವಾಸದಲ್ಲಿದ್ದರಿಂದ ಈ ಭಾರೀ ಅವಕಾಶ ಸಿಕ್ಕಿಲ್ಲ. ಬೇರೆ ಕಾರ್ಯಕ್ರಮಗಳೆಲ್ಲಾ ಫಿಕ್ಸ್ ಆಗಿತ್ತು. ಹೀಗಾಗಿ ರಂಜಾನ್ ಸಮಯದಲ್ಲಿ ಸ್ನೇಹ ಕೂಟ ಮಾಡುವುದಕ್ಕೆ ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಮಾಡುತ್ತೇವೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ. 
 

ಬೆಂಗಳೂರು (ಜೂ. 14): ರಂಜಾನ್ ಹಬ್ಬದ ಹಿನ್ನಲೆಯಲ್ಲಿ  ಮುಸ್ಲಿಂ ಬಾಂಧವರು ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ್ದಾರೆ.  ಶ್ರೀಗಳಿಗೆ ಫಲವಸ್ತು ನೀಡಿ ಗೌರವ ಸಲ್ಲಿಸಿದ್ದಾರೆ. 

ಇಫ್ತಾರ್ ಕೂಟವೇ ಆಗಬೇಕಿಲ್ಲ. ಸ್ನೇಹ ಕೂಟವನ್ನು ಯಾವಾಗ ಬೇಕಾದರೂ ಮಾಡಬಹುದು. ಉತ್ತರ ಭಾರತ ಪ್ರವಾಸದಲ್ಲಿದ್ದರಿಂದ ಈ ಭಾರೀ ಅವಕಾಶ ಸಿಕ್ಕಿಲ್ಲ. ಬೇರೆ ಕಾರ್ಯಕ್ರಮಗಳೆಲ್ಲಾ ಫಿಕ್ಸ್ ಆಗಿತ್ತು. ಹೀಗಾಗಿ ರಂಜಾನ್ ಸಮಯದಲ್ಲಿ ಸ್ನೇಹ ಕೂಟ ಮಾಡುವುದಕ್ಕೆ ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಮಾಡುತ್ತೇವೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ. 

ಕ್ರೈಸ್ಥರು,ಮುಸಲ್ಮಾನರನ್ನು ಕರೆಯುತ್ತೇವೆ. ಯೋಗ್ಯ ಸಂದರ್ಭ ನೋಡಿ ಸ್ನೇಹ ಕೂಟ ಮಾಡುತ್ತೇವೆ.  ಈ ಬಾರಿ ಯಾರ ವಿರೋಧವು ಇರಲಿಲ್ಲ.  ಸಂಘದ ಪ್ರಮುಖರೇ ನಮ್ಮ ವಿರೋಧವಿಲ್ಲ ಎಂದು ಹೇಳಿದ್ದರು.  ಹಿಂದೂಗಳಲ್ಲೇ ಕೆಲವರು ನೀವು ಮಾಡಿದ್ದು ತಪ್ಪು ಎಂದು ಹೇಳಿದ್ದರು. ನಮ್ಮ ಪರಮಗುರುಗಳು ಪರ್ಯಾಯ ಪೂರ್ವದಲ್ಲಿ ಹಾಜೀ ಅಬ್ದುಲ್ಲಾ ಅವರಿಂದ ಪಾದ ಪೂಜೆ ಸ್ವೀಕಾರ ಮಾಡಿದ್ದಾರೆ.  ನಾವು ಅವರನ್ನು ಕರೆಸಿ ಊಟ ಹಾಕಿದ್ರೆ ಏನು ತಪ್ಪಾಗುತ್ತದೆ ಎಂದು ಹೇಳಿದ್ದೆ.  ಎಲ್ಲಾ ಸಮಾಜದ ಜೊತೆ ಸ್ನೇಹ ಬಾಂಧವ್ಯ ಬೆಳೆಯಬೇಕು. ದೇಶದಲ್ಲಿ ಪರಸ್ಪರ ಪ್ರೀತಿ,ಸಹಕಾರ,ಸಾಮರಸ್ಯ ನಿರ್ಮಾಣವಾಗಬೇಕು. ಪರಸ್ಪರ ಮೈತ್ರಿ ಬೆಳೆಯಲಿ,ಶಾಂತಿ ನೆಲೆಸಲಿ. ಹಿಂದೂಗಳು, ಮುಸಲ್ಮಾನರು,ಕ್ರೈಸ್ತರು ಎಲ್ಲರೂ ಶಾಂತಿ ಸೌಹಾರ್ದ ಬೆಳೆಯಲು ಸಹಕರಿಸಬೇಕೆಂದು ಕೋರಿಕೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.  

loader