ಗೌರಿ ಲಂಕೇಶ್ ಹತ್ಯೆಯನ್ನು ನಮ್ಮ ಶ್ರೀರಾಮಸೇನೆ ಖಂಡಿಸುತ್ತದೆ. ಗೌರಿ ಅವರ ವೈಚಾರಿಕತೆಯನ್ನು ನಾವು ಒಪ್ಪುವುದಿಲ್ಲ. ಆದರೆ ಹತ್ಯೆ ಮಾಡುವ ಸಂಸ್ಕೃತಿ ಹಿಂದೂ ಧರ್ಮದಲ್ಲಿಲ್ಲ.

ಮಂಡ್ಯ(ಸೆ.21): ದೇಶದಲ್ಲಿ ಹಿಂದೂಗಳು ಒಗ್ಗಟ್ಟಾದರೆ ಹಿಂದೂ ರಾಷ್ಟ್ರ ನಿರ್ಮಾಣವಾಗುವುದನ್ನು ತಪ್ಪಿಸಲು ದೇವೇಗೌಡ ಅವರು ಸೇರಿದಂತೆ ಯಾರಿಂದಲೂ ಸಾಧ್ಯವಿಲ್ಲ ಎಂದು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹಿಂದೂ ರಾಷ್ಟ್ರ ಆಗಲು ಬಿಡಲ್ಲ ಎಂಬ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿಕೆಗೆ ಅವರು ಹೀಗೆ ಪ್ರತಿಕ್ರಿಯಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಂಕರಮಠದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಮುತಾಲಿಕ್‌, ನವರಾತ್ರಿಯ ಮೊದಲ ದಿನ ಶಂಕರಮಠದಲ್ಲಿ ಪೂಜೆ ಸಲ್ಲಿಸಿದ್ದೇನೆ. ಹಿಂದೂಗಳಿಗೆ ಒಳ್ಳೆಯದಾಗಲಿ, ಹಿಂದೂ ರಾಷ್ಟ್ರ ನಿರ್ಮಾಣವಾಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ. ಗೌರಿ ಲಂಕೇಶ್ ಹತ್ಯೆಯನ್ನು ನಮ್ಮ ಶ್ರೀರಾಮಸೇನೆ ಖಂಡಿಸುತ್ತದೆ. ಗೌರಿ ಅವರ ವೈಚಾರಿಕತೆಯನ್ನು ನಾವು ಒಪ್ಪುವುದಿಲ್ಲ. ಆದರೆ ಹತ್ಯೆ ಮಾಡುವ ಸಂಸ್ಕೃತಿ ಹಿಂದೂ ಧರ್ಮದಲ್ಲಿಲ್ಲ. ಹಂತಕರನ್ನು ಕೂಡಲೇ ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಾಹಿತಿಗಳು, ವಿಚಾರವಾದಿಗಳು ಗೌರಿ ಅವರನ್ನು ಹಿಂದೂಗಳೇ ಕೊಲೆ ಮಾಡಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಇದು ಮೂರ್ಖತನದ ಹೇಳಿಕೆ. ಅವರಿಗೆ ಮಾನ ಮರ್ಯಾದೆ ಇದ್ದರೆ ತನಿಖೆಯ ದಿಕ್ಕು ತಪ್ಪಿಸುವ ಕೆಲಸವನ್ನು ಮಾಡಬೇಡಿ ಎಂದರು.