ಮುಂದಿನ ಚುನಾವಣೆಯಲ್ಲಿ ಪ್ರಮೋದ್ ಮುತಾಲಿಕ್ ಸ್ಪರ್ಧೆ..?

First Published 14, Jan 2018, 3:15 PM IST
Muthalik Contest In Election
Highlights

ಶ್ರೀರಾಮ ಸೇನೆಯು ರಾಜ್ಯದಲ್ಲಿ ಶಿವಸೇನೆ ಪಕ್ಷದ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ತಾವು ಶೃಂಗೇರಿ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿ ದ್ದೇನೆ ಎಂದು ಶ್ರೀ ರಾಮಸೇನೆ ಸಂಘಟನೆ ರಾಷ್ಟ್ರೀಯ ಸಂಚಾಲಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಶೃಂಗೇರಿ(ಜ.14): ಶ್ರೀರಾಮ ಸೇನೆಯು ರಾಜ್ಯದಲ್ಲಿ ಶಿವಸೇನೆ ಪಕ್ಷದ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.

ತಾವು ಶೃಂಗೇರಿ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿ ದ್ದೇನೆ ಎಂದು ಶ್ರೀ ರಾಮಸೇನೆ ಸಂಘಟನೆ ರಾಷ್ಟ್ರೀಯ ಸಂಚಾಲಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಚಿಕ್ಕಮಗಳೂರು, ತೇರದಾಳ, ವಿಜಯಪುರ ಕ್ಷೇತ್ರಗಳು ನನ್ನ ಗುರಿಯಾಗಿದ್ದರೂ, ಶೃಂಗೇರಿ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡಿದ್ದೇನೆ. 50 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಈಗಾಗಲೇ ಪಟ್ಟಿ ಸಿದ್ಧಪಡಿಸಲಾಗುತ್ತಿದೆ ಎಂದರು.

loader