ನವದೆಹಲಿ[ಜೂ.09]: ಒಂದಾದ ಬಳಿಕ ಮತ್ತೊಂದರಂತೆ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಇದೀಗ ಮುಜಫ್ಫರ್ ನಗರದಲ್ಲಿ ಅಪ್ರಾಪ್ತ ಬಾಲಕನೊಬ್ಬ ಏಳು ವರ್ಷದ ಪುಟ್ಟ ಬಾಲಕಿಯನ್ನು ರೇಪ್ ಮಾಡಿರುವ ಪ್ರಕರಣ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ. ಸದ್ಯ 15 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಕುರಿತಾಗಿ ಮಾಹಿತಿ ನೀಡಿರುವ ಪೊಲೀಸರು 'ಮುಜಫ್ಫರ್ ನಗರದ ಹಳ್ಳಿಯೊಂದರಲ್ಲಿ 15 ವರ್ಷದ ಬಾಲಕ ಸಿಹಿ ತಿಂಡಿ ನೀಡುವ ಆಮಿಷವೊಡ್ಡಿ 7 ವರ್ಷದ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಸದ್ಯ ಆತನನ್ನು ಬಂಧಿಸಿ ಬಾಲಾಪರಾಧಿ ಸುಧಾರಣಾ ಕೇಂದ್ರಕ್ಕೆ ಕಳುಹಿಸಿದ್ದು, ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದೇವೆ' ಎಂದಿದ್ದಾರೆ.

ಇತ್ತೀಚೆಗೆ ಹಲವಾರು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬಿಹಾರದ ಗಯಾದಲ್ಲೂ 14 ವರ್ಷದ ಬಾಲಕಿಯೊಬ್ಬಳ ಮೇಲೆ ನೆರೆಮನೆಯಾತ ಅತ್ಯಾಚಾರವೆಸಗಿದ್ದ. ದುರಾದೃಷ್ಟವಶಾತ್ ಸಂತ್ರಸ್ತ ಬಾಲಕಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು.