ಪತ್ರಕರ್ತ ರವಿ ಬೆಳಗೆರೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸುನಿಲ್ ಹೆಗ್ಗರವಳ್ಳಿ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ.
ಬೆಂಗಳೂರು(ಡಿ.10): ಪತ್ರಕರ್ತ ರವಿ ಬೆಳಗೆರೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸುನಿಲ್ ಹೆಗ್ಗರವಳ್ಳಿ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ.
ಈ ಸಂಬಂಧ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿದ ಸುನಿಲ್ ಹೆಗ್ಗರವಳ್ಳಿ ಅವರು ತಮ್ಮ ಜೀವಕ್ಕೆ ಅಪಾಯವಿದ್ದು, ತಮಗೆ ರಕ್ಷಣೆ ನೀಡಬೇಕು ಎಂದು ಕೇಳಿಕೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಬೆಳಗೆರೆ ಅವರು ಈಗಾಗಲೇ ಸಿಸಿಬಿ ಪೊಲೀಸರ ವಶದಲ್ಲಿದ್ದು, ನಾಳೆಗೆ ಸಿಸಿಬಿ ಕಸ್ಟಡಿ ಅವಧಿ ಮುಕ್ತಾಯವಾಗಲಿದೆ. ಈ ನಿಟ್ಟಿನಲ್ಲಿ ಮತ್ತೆ ನಾಳೆ ನ್ಯಾಯಾಧೀಶರ ಮುಂದೆ ಅವರನ್ನು ಹಾಜರುಪಡಿಸಲಾಗುತ್ತದೆ.
