Asianet Suvarna News Asianet Suvarna News

ಲೋಕಸಭಾ ಚುನಾವಣೆಗೆ ಜಿ.ಟಿ ದೇವೇಗೌಡ ಪುತ್ರ ಸ್ಪರ್ಧೆ..?

ಮುಂಬರುವ ಲೋಕಸಭಾ ಚುನಾವಣೆಯಲ್ಲಿ  ಜಿಟಿ ದೇವೇಗೌಡ ಅವರ ಪುತ್ರ ಜಿ.ಡಿ.ಹರೀಶ್‌ಗೌಡ ಅವರು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರಾ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸ್ವತಃ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರೇ ಸ್ಪಷ್ಟನೆ ನೀಡಿದ್ದು, ನನ್ನ ಮಗ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

My Son Will Not Contest To Lok Sabha Election Says GT Devegowda
Author
Bengaluru, First Published Aug 5, 2018, 12:09 PM IST

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನನ್ನ ಮಗ ಜಿ.ಡಿ.ಹರೀಶ್‌ಗೌಡ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. 

ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಲೋಕಸಭೆಯಲ್ಲಿ ಯಾರೊಂದಿಗೆ ಹೊಂದಾ ಣಿಕೆ ಮಾಡಿಕೊಳ್ಳಬೇಕು ಎಂಬ ಕುರಿತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತೀರ್ಮಾನಿಸುವರು. ಅದರಂತೆ ಚುನಾವಣೆ ಎದುರಿಸಲಾಗುವುದು. 

ಆದರೆ ನನ್ನ ಮಗ ಜಿ.ಡಿ.ಹರೀಶ್ ದೇವೇಗೌಡರನ್ನು ಕಣಕ್ಕೆ ಇಳಿಸುವುದಿಲ್ಲ. ಒಂದೇ ಚುನಾವಣೆ ಸಾಕಾಗಿದೆ. ಈಗ ಮತ್ತೊಂದು ಚುನಾವಣೆ ಎದುರಿಸುವ ಸ್ಥಿತಿಯಲ್ಲಿ ಇಲ್ಲ. ಪಕ್ಷ ನನ್ನ ಮಗನೇ ಅಭ್ಯರ್ಥಿ ಎಂದು ತೀರ್ಮಾನಿಸಿದರೂ ಈ ಬಾರಿ ಸ್ಪರ್ಧಿಸುವುದಿಲ್ಲ ಎಂದರು. 

Follow Us:
Download App:
  • android
  • ios