ರಾಘವೇಂದ್ರ ಆತ್ಮಹತ್ಯೆ ಪ್ರಕರಣ ತನಿಖೆಯ ಹೊಣೆ ಕೋಲಾರ ಡಿವೈಎಸ್ಪಿಗೆ

ಮಾಲೂರು (ಅ.18): ಠಾಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಮಾಲೂರು ವೃತ್ತ ನಿರೀಕ್ಷಕ ರಾಘವೇಂದ್ರ ಡೆತ್ ನೋಟ್’ನಲ್ಲಿ ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆದಿರುವುದಾಗಿ ತಿಳಿದು ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಘವೇಂದ್ರ ಆತ್ಮಹತ್ಯೆ ಪ್ರಕರಣವನ್ನು ತನಿಖೆಗಾಗಿ ಕೋಲಾರ ಡಿವೈಎಸ್ಪಿಗೆ ವಹಿಸಲಾಗಿದೆ.

ಘಟನಾಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್, ಠಾಣೆಯ ತರ ಸಿಬ್ಬಂದಿಗಳಿಂದ ಮಾಹಿತಿ ಪಡೆದಿದ್ದಾರೆ.

ಅವರ ಚೆಂಬರ್’ನಲ್ಲಿ ಡೆಡ್ ಬಾಡಿ ಜತೆಗೆ ಗನ್ ಶಾಟ್ ಇತ್ತು. ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್​​ನೋಟ್​​ ಸಿಕ್ಕಿದೆ. ಅವರ ಬಗ್ಗೆ ಒಳ್ಳೆಯ ಅಭಿಪ್ರಾಯವಿತ್ತು. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆಗೆ ಸೂಚಿಸಲಾಗಿದೆ. ಅವರ ಕುಟುಂಬದವರಬ್ನು ಕರೆಯಿಸಿ ಅವರ ಸಮಕ್ಷಮದಲ್ಲಿ ತನಿಖೆ ಆರಂಭಿಸಲಾಗಿದೆ, ಎಂದು ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಮೇಲ್ನೋಟಕ್ಕೆ ಒಂದು ಡೆತ್ ನೋಟ್ ಸಿಕ್ಕಿದೆ, ಅದನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿಸಲಾಗಿದೆ, ಎಂದು ಅವರು ಹೇಳಿದ್ದಾರೆ.