ಮೈಸೂರು(ಅ.01) ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ನೀಡಲಾಗಿದೆ. ಚಾಮುಂಡಿಬೆಟ್ಟದ ನಾಡ ಅಧಿದೇವತೆಗೆ ಅಗ್ರಪೂಜೆ ಸಲ್ಲಿಸುವ ಮೂಲಕ ದಸರೆಗೆ ಚಾಲನೆ ದೊರಕಿದ್ದು, ಸಾಹಿತಿ ಚನ್ನವೀರ ಕಣವಿ ಅವರಿಂದ ನಾಡಹಬ್ಬ ಉದ್ಘಾಟನೆಗೊಂಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಾಮುಂಡಿಬೆಟ್ಟದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಬೆಳಗ್ಗೆ 11 ಗಂಟೆ 40 ನಿಮಿಷಕ್ಕೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ‌ ನಾಡಹಬ್ಬ ದಸರಾಕ್ಕೆ ಚಾಲನೆ ದೊರಕಿದೆ. 

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಡಾ. ಎಚ್.ಸಿ.ಮಹದೇವಪ್ಪ, ಎಚ್.ಎಸ್.ಮಹದೇವ ಪ್ರಸಾದ್, ಕ್ರೀಡಾಪಟುಗಳಾದ ಅಶ್ವಿನಿ ಪೊನ್ನಪ್ಪ, ದೀಪಾಮಲ್ಲಿಕ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ಚಿಕ್ಕಮಾದು, ಸಾ.ರಾ.ಮಹೇಶ್ ಉಪಸ್ಥಿತಿ.