ನಾಡಹಬ್ಬ ದಸರಾ ಮಹೋತ್ಸವಕ್ಕೆ ನಾಳೆ ಅಧಿದೇವತೆ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ವಿದ್ಯುಕ್ತ ಚಾಲನೆ ಸಿಗಲಿದೆ. 2017ರ ದಸರಾ ಉದ್ಘಾಟನೆಗೆ ಸಕಲ ಸಿದ್ಧತೆಗಳು ನಡೆದಿದ್ದು, ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್ ಅಹಮದ್ ದಸರಾಗೆ ಚಾಲನೆ ನೀಡಲು ಕುಟುಂಬ ಸಮೇತ ಆಗಮಿಸಿದ್ದಾರೆ. ನವರಾತ್ರಿ ಸಂಭ್ರಮಕ್ಕೆ ಅರಮನೆ ನಗರಿ ಸಜ್ಜಾಗಿದೆ.

ಮೈಸೂರು (ಸೆ.15): ನಾಡಹಬ್ಬ ದಸರಾ ಮಹೋತ್ಸವಕ್ಕೆ ನಾಳೆ ಅಧಿದೇವತೆ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ವಿದ್ಯುಕ್ತ ಚಾಲನೆ ಸಿಗಲಿದೆ. 2017ರ ದಸರಾ ಉದ್ಘಾಟನೆಗೆ ಸಕಲ ಸಿದ್ಧತೆಗಳು ನಡೆದಿದ್ದು, ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್ ಅಹಮದ್ ದಸರಾಗೆ ಚಾಲನೆ ನೀಡಲು ಕುಟುಂಬ ಸಮೇತ ಆಗಮಿಸಿದ್ದಾರೆ. ನವರಾತ್ರಿ ಸಂಭ್ರಮಕ್ಕೆ ಅರಮನೆ ನಗರಿ ಸಜ್ಜಾಗಿದೆ.

ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್ ಅಹಮದ್ ನಾಳೆ ಗಣ್ಯರ ಸಮ್ಮುಖದಲ್ಲಿ ತಾಯಿ ಚಾಮುಂಡಿಗೆ ಪುಷ್ಪಾರ್ಚನೆ ಮಾಡೋ ಮೂಲಕ ನವರಾತ್ರಿ ಸಂಭ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 8.45ರ ಶುಭ ತುಲಾ ಲಗ್ನದಲ್ಲಿ ನಾಡಹಬ್ಬಕ್ಕೆ ಚಾಲನೆ ಸಿಗಲಿದೆ. ಇಂದು ಮೈಸೂರಿಗೆ ಪತ್ನಿ ಸಮೇತ ಆಗಮಿಸಿದ ನಿಸಾರ್ ಅಹಮದ್ ಅವರಿಗೆ ಜಿಲ್ಲಾಡಳಿತ ಅದ್ದೂರಿಯಾಗಿ ಸ್ವಾಗತ ಕೋರಿತು. ಇನ್ನೂ ನಾಳೆ ಬೆಳಗ್ಗೆ ಚಾಮುಂಡಿ ತಾಯಿಗೆ ರುದ್ರಾಭೀಷೇಕ, ಪಂಚಾಮೃತಾಭಿಷೇಕ.. ನವರಾತ್ರಿ ಯಂತ್ರಾರ್ಚನೆ ಬಳಿಕ ಸಿಎಂ ಸೇರಿದಂತೆ ಪ್ರಮುಖರು ಸಮ್ಮುಖದಲ್ಲಿ ಚಾಮುಂಡಿಯ ಮೂರ್ತಿಗೆ ಪೂಜೆ ಸಲ್ಲಿಸಲಾಗುತ್ತೆ. ಇದಾದ ಬಳಿಕ ರಥದಲ್ಲಿ ಉತ್ಸವ ಮೂರ್ತಿಯನ್ನ ಉದ್ಘಾಟನಾ ಸ್ಥಳಕ್ಕೆ ತಂದು ಪೂಜಿಸಿದ ಬಳಿಕ ದಸರಾಗೆ ಚಾಲನೆ ನೀಡಲಾಗುತ್ತೆ.

ಚಾಮುಂಡಿಬೆಟ್ಟದಲ್ಲಿ ದಸರಾಗೆ ಚಾಲನೆ ಸಿಗುತ್ತಲೇ.. ಇತ್ತ ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭವಾಗಲಿದೆ. ಯದುವೀರ್ ಒಡೆಯರ್ ಮಧ್ಯಾಹ್ನ 12 ಗಂಟೆಗೆ ರತ್ನಖಚಿತ ಸಿಂಹಾಸವನ್ನೇರಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಪತ್ನಿ ತ್ರಿಷಿಕಾ ಕುಮಾರಿ ಸಹ ಭಾಗವಹಿಸಲಿದ್ದಾರೆ. ಇದೆಲ್ಲದರ ಜೊತೆಗೆ ವಸ್ತು ಪ್ರದರ್ಶನ ಆವರಣದಲ್ಲಿರುವ ಕುಸ್ತಿ ಪಂದ್ಯಾವಳಿ, ಕಲಾಮಂದಿರದ ಚಲನಚಿತ್ರೋತ್ಸವ, ದಸರಾ ವಸ್ತು ಪ್ರದರ್ಶನಗಳಿಗೂ ಚಾಲನೆ ಸಿಗಲಿದೆ... ಒಟ್ಟಿನಲ್ಲಿ ನಾಳೆಯಿಂದ ಮೈಸೂರಲ್ಲಿ ಸಂಭ್ರಮವೋ ಸಂಭ್ರಮ.