ಮೈಸೂರಿನಲ್ಲಿ ನಡೆಯುತ್ತಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ ಬೀಳಲಿದೆ.

ಮೈಸೂರು(ನ.26): ಮೈಸೂರಿನಲ್ಲಿ ನಡೆಯುತ್ತಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ ಬೀಳಲಿದೆ.

ಮೊದಲೆರಡು ದಿನದ ಸಮ್ಮೇಳನ ಯಶಸ್ವಿಯಾಗಿದೆ. ಇಂದೂ ಕೂಡ ವಿವಿಧ ಗೋಷ್ಠಿಗಳು ನಡೆಯಲಿವೆ. ಬೆಳಗ್ಗೆ 9.30 ಕ್ಕೆ ಪ್ರಧಾನ ವೇದಿಕೆಯಲ್ಲಿ ಸಮಕಾಲೀನ ಸಂದರ್ಭ-ಬಹುತ್ವ ಸವಾಲುಗಳು ವಿಚಾರವಾಗಿ ಗೋಷ್ಠಿ ನಡೆಯಲಿದೆ. ನಂತರ ಡಾ. ಸಿದ್ದಲಿಂಗ ಪಟ್ಟಣ ಶೆಟ್ಟಿ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದ್ದು, ಡಾ.ಜಯಂತ್​ ಕಾಯ್ಕಿಣಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ನಡೆಯಲಿದ್ದು, ಬಹಿರಂಗ ಅಧಿವೇಶನ ನಡೆಯಲಿದೆ. ಇನ್ನೂ ಸಮಾರೋಪ ಸಮಾರಂಭಕ್ಕೆ ಗೌರವ ಅಥಿತಿಗಳಾಗಿ ಕೇಂದ್ರ ಸಚಿವ ಅನಂತಕುಮಾರ್​, ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್​.ಕೆ.ಪಾಟೀಲ್​, ಹಿರಿಯ ಸಾಹಿತಿ ಹೆಚ್​.ಎಸ್.ವೆಂಕಟೇಶ್​ ಮೂರ್ತಿ ಭಾಗಿಯಾಗಲಿದ್ದಾರೆ. ಇನ್ನೂ ಇಂದು ಭಾನುವಾರವಾಗಿದ್ದರಿಂದ ವೀಕೆಂಡ್ ಮೂಡ್​ನಲ್ಲಿರುವ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಮ್ಮೇಳನಕ್ಕೆ ಆಗಮಿಸುವ ನಿರೀಕ್ಷೆಯಿದೆ.