ಮೈಸೂರು(ಸೆ.18): ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರರವರು ತಮ್ಮ ತಂದೆಯ ವರುಣಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.
ಜನಪ್ರತಿನಿಧಿಯಲ್ಲದ ಯತೀಂದ್ರರವರು ಹೇಗೆ ಅಧಿಕಾರಿಗಳ ಸಭೆ ನಡೆಸುತ್ತಾರೆ ಮತ್ತು ಅದರಲ್ಲಿ ಅಧಿಕಾರಿಗಳು ಹೇಗೆ ಭಾಗವಹಿಸುತ್ತಾರೆ ಎನ್ನುವುದರ ಬಗ್ಗೆ ಪ್ರಶ್ನೆ ಎದ್ದಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಹಾದೇವಪ್ಪನವರು ಜಿಲ್ಲೆಗೆ ಬರುವುದು, ಅಧಿಕಾರಿಗಳೊಂದಿಗೆ ಸಭೆ ನಡೆಸುವುದು ಅಪರೂಪವಾಗಿದೆ. ಇದೀಗ ಮುಖ್ಯಮಂತ್ರಿ ಪುತ್ರನೇ ಸಭೆ ನಡೆಸುತ್ತಿರುವುದು ಅಧಿಕಾರಿಗಳಿಗೂ ಇಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ತಿಂಗಳಿನಿಂದ ಜನಪ್ರತಿನಿಧಿಯಲ್ಲದ ಯತೀಂದ್ರರವರು ಪದೇ ಪದೇ ಅಧಿಕಾರಿಗಳ ಸಭೆ ನಡೆಸಿ ಸಲಹೆ ಸೂಚನೆ ನೀಡುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.
