ಹೊಸ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ. ಪ್ರವಾಸೋದ್ಯಮಕ್ಕೆ ಜಿಲ್ಲಾಡಳಿತ ಒತ್ತು ನೀಡಿದ್ದರಿಂದ  ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ  ಶೇ.100 ರಷ್ಟು ಹೋಟೆಲ್'ಗಳು ಬುಕ್ ಆಗಿವೆ.

ಮೈಸೂರು (ಡಿ.31): ಹೊಸ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ. ಪ್ರವಾಸೋದ್ಯಮಕ್ಕೆ ಜಿಲ್ಲಾಡಳಿತ ಒತ್ತು ನೀಡಿದ್ದರಿಂದ ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಶೇ.100 ರಷ್ಟು ಹೋಟೆಲ್'ಗಳು ಬುಕ್ ಆಗಿವೆ.

ವರ್ಷಾಚರಣೆ ಅಂತ್ಯಯಲ್ಲಿ ಜಿಲ್ಲಾಡಳಿತದ ಮಾಗಿ ಉತ್ಸವ, ಓಪನ್ ಸ್ಟ್ರೀಟ್ ಫೆಸ್ಟಿವಲ್ ಆಯೋಜನೆ ಎಫೆಕ್ಟ್'ನಿಂದಾಗಿ ಮೈಸೂರಿನತ್ತ ಹೊರ ಜಿಲ್ಲೆ, ರಾಜ್ಯಗಳ ಪ್ರವಾಸಿಗರ ದಂಡು ಹರಿದು ಬರುತ್ತಿದೆ. ಮೈಸೂರಿನಲ್ಲಿ ಹೊಸ ವರ್ಷ ಬರಮಾಡಿಕೊಳ್ಳಲು ಭರ್ಜರಿ ಸಿದ್ಧತೆ ನಡೆದಿದ್ದು, ಕಳೆದ ಹತ್ತು ವರ್ಷಗಳಲ್ಲಿ ಈ ಬಾರಿಯೇ ಮೈಸೂರಿಗೆ ಅತಿ ಹೆಚ್ಚು ಪ್ರವಾಸಿಗರು ಆಗಮಿಸಿದ್ದಾರೆ.

ಮಧ್ಯರಾತ್ರಿ 1 ಗಂಟೆವರೆಗೂ ಹೊಸ ವರ್ಷಾಚರಣೆಗೆ ಕಾಲಾವಕಾಶ ನೀಡಲು ನಗರ ಪೊಲೀಸ್ ಆಯುಕ್ತ ಡಾ ಸುಬ್ರಹ್ಮಣ್ಣೇಶ್ವರ ರಾವ್ ಅನುಮತಿ ನೀಡಿದ್ದಾರೆ.

"ವಿಶ್ವದಾದ್ಯಂತ ಸಾಕಷ್ಟು ಪ್ರವಾಸಿಗರು ಮೈಸೂರಿಗೆ ಬಂದಿದ್ದಾರೆ ಅವರ ರಕ್ಷಣೆ ನಮ್ಮ ಹೊಣೆ. ಮಧ್ಯ ಸೇವನೆ ಮಾಡಿ ವಾಹನ ಚಲಾಯಿಸೋದು ಅಪರಾಧ. ಅಂತಹ ವ್ಯಕ್ತಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಮಹಿಳೆಯರು, ಮಕ್ಕಳ ರಕ್ಷಣೆಗೆ ವಿಶೇಷ ಮಹಿಳಾ ಪೊಲೀಸ್ ತಂಡ ರಚನೆ ಮಾಡಿದ್ದೇವೆ. ಹೊಸ ವರ್ಷಾಚರಣೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಂಡಿದ್ದೇವೆ" ಎಂದಿದ್ದಾರೆ.