Asianet Suvarna News Asianet Suvarna News

ಕರ್ನಾಟಕ ಬಂದ್ ಗೆ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಇಲ್ಲ ಬೆಂಬಲ

ರೈತರ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ನಾಳೆ ಬಿಜೆಪಿ ಕರೆ ನೀಡಿರುವ ಕರ್ನಾಟಕ  ಬಂದ್ ಗೆ ರಾಜ್ಯ ಕಬ್ಬು ಬೆಳೆಗಾರರ ಸಂಘ ಬೆಂಬಲ ನೀಡುವುದಿಲ್ಲ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮೈಸೂರಿನಲ್ಲಿ ಹೇಳಿದ್ದಾರೆ. 
 

Mysuru Farmers not Supporting Karnataka Band

ಮೈಸೂರು (ಮೇ.27): ರೈತರ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ನಾಳೆ ಬಿಜೆಪಿ ಕರೆ ನೀಡಿರುವ ಕರ್ನಾಟಕ  ಬಂದ್ ಗೆ ರಾಜ್ಯ ಕಬ್ಬು ಬೆಳೆಗಾರರ ಸಂಘ ಬೆಂಬಲ ನೀಡುವುದಿಲ್ಲ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮೈಸೂರಿನಲ್ಲಿ ಹೇಳಿದ್ದಾರೆ. 

ನಾಳೆ ಬಂದ್’ಗೆ ಕರೆ ನೀಡಿರುವ ಬಿಜೆಪಿಯ ಯಾವೊಬ್ಬ ನಾಯಕರು ನಮ್ಮನ್ನು ಸಂಪರ್ಕಿಸಿಲ್ಲ. ಈಗಷ್ಟೇ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡುವ ವಿಶ್ವಾಸವಿದೆ. ಈ ಸಂಬಂಧ ಸಿಎಂ ಕುಮಾರಸ್ವಾಮಿ ಸಭೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಸದ್ಯದಲ್ಲೇ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ. ರೈತರ ಸಾಲಮನ್ನಾ ಮಾಡುವಂತೆ ಒತ್ತಾಯಿಸುತ್ತೇವೆ. ಒಂದು ವೇಳೆ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಹೋರಾಟ ಆರಂಭಿಸುತ್ತೇವೆ ಎಂದು ಹೇಳಿದ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. 
 

Follow Us:
Download App:
  • android
  • ios