ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲೆ ನಜ್ಮಾ ಹೆಫ್ತುಲ್ಲಾ ಅವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಎಂಟು ಮಂದಿ ಸಚಿವರಿಗೆ ಪ್ರಮಾಣ ವಚನವನ್ನು ಬೋಧಿಸಿದರು.
ಇಂಫಾಲ್ (ಮಾ.16): ಎನ್. ಬಿರೇನ್ ಸಿಂಗ್ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸುವ ಮೂಲಕ ಮಣಿಪುರದಲ್ಲಿ ಬಿಜೆಪಿ ಪ್ರಥಮ ಬಾರಿಗೆ ತನ್ನ ಸರ್ಕಾರ ರಚಿಸಿದೆ.
ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್’ಪಿಪಿ)ಯ ವೈ. ಜಾಯ್ ಕುಮಾರ್ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲೆ ನಜ್ಮಾ ಹೆಫ್ತುಲ್ಲಾ ಅವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಎಂಟು ಮಂದಿ ಸಚಿವರಿಗೆ ಪ್ರಮಾಣ ವಚನವನ್ನು ಬೋಧಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸ ಜಾಯ್ ಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಅಭಿನಂಧಿಸಿದ್ದಾರೆ. ಮಣಿಪುರದ ಅಭಿವೃದ್ಧಿಗಾಗಿ ಹೊಸ ಸರ್ಕಾರವು ಅವಿರತವಾಗಿ ಶ್ರಮಿಸುವುದೆಂಬ ವಿಶ್ವಾಸವನ್ನು ಮೋದಿ ವ್ಯಕ್ತಪಡಿಸಿದ್ದಾರೆ.