ಕಾಂಗ್ರೆಸ್‌ಗೆ ಗುಡ್ ಬೈ ಹೇಳ್ತಾರ ಈ ಮುಖಂಡ..?

N Rajanna May Quit Congress
Highlights

ಇನ್ನೇನು ಲೋಕಸಭಾ ಚುನಾವಣೆ ಇನ್ನೇನು ಸಮೀಪಿಸುತ್ತಿದ್ದು, ಕಾಂಗ್ರೆಸ್ ಮುಖಂಡರೋರ್ವರು ಇದೀಗ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡುವ ಇಂಗಿತ ಹೊಂದಿದ್ದು, ಟಿಕೆಟ್ ಸಿಗದಿದ್ದಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ. 

ಮಧುಗಿರಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟು ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಭಾನುವಾರ ತಿಳಿಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನಾನು ಸಹ ಪ್ರಬಲ ಆಕಾಂಕ್ಷಿ. ಯಾವುದೇ ಕಾರಣಕ್ಕೂ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಬಾರದು. ಬಿಟ್ಟುಕೊಟ್ಟರೆ, ಪಕ್ಷೇತರನಾಗುವೆ ಎಂದರು.

loader