ಅಮಾನ್ಯಗೊಂಡ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಕ್ರಮವಾಗಿ ಬದಲಿಸಿದ ಆರೋಪ ಸಂಬಂಧ ಪೊಲೀಸರು ದಾಖಲಿಸಿರುವ ಪ್ರತ್ಯೇಕ 7 ದೂರುಗಳ ಸಂಬಂಧ ಜಾಮೀನು ಮಂಜೂರು ಮಾಡಬೇಕೆಂದು ಕೋರಿ ಬಿಬಿಎಂಪಿ ಮಾಜಿ ಸದಸ್ಯ ವಿ. ನಾಗರಾಜು ಮತ್ತವರ ಇಬ್ಬರು ಪುತ್ರರಾದ ಗಾಂಧಿ ಮತ್ತು ಶಾಸ್ತ್ರಿ ಹೈಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು (ಸೆ.15): ಅಮಾನ್ಯಗೊಂಡ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಕ್ರಮವಾಗಿ ಬದಲಿಸಿದ ಆರೋಪ ಸಂಬಂಧ ಪೊಲೀಸರು ದಾಖಲಿಸಿರುವ ಪ್ರತ್ಯೇಕ 7 ದೂರುಗಳ ಸಂಬಂಧ ಜಾಮೀನು ಮಂಜೂರು ಮಾಡಬೇಕೆಂದು ಕೋರಿ ಬಿಬಿಎಂಪಿ ಮಾಜಿ ಸದಸ್ಯ ವಿ. ನಾಗರಾಜು ಮತ್ತವರ ಇಬ್ಬರು ಪುತ್ರರಾದ ಗಾಂಧಿ ಮತ್ತು ಶಾಸ್ತ್ರಿ ಹೈಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದಾರೆ.
7 ಪ್ರಕರಣಗಳ ಸಂಬಂಧ ನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಿ ನಾಗರಾಜು ಮತ್ತವರ ಪುತ್ರರಿಗೆ ಜಾಮೀನು ನಿರಾಕರಿಸಿತ್ತು. ಇದರಿಂದ ಜಾಮೀನು ಕೋರಿ ಹೈಕೋರ್ಟ್’ಗೆ 7 ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಅರ್ಜಿಗಳ ವಿಚಾರಣೆ ನ್ಯಾ. ರತ್ನಕಲಾ ಅವರಿದ್ದ ಏಕ ಸದಸ್ಯ ಪೀಠ ನಡೆಸಿತು. ಸೆ.21 ರಂದು ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕು. ಅರ್ಜಿದಾರರ ವಿರುದ್ಧ ಅಧೀನ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ಕೋರ್ಟ್’ಗೆ ಒದಗಿಸಲು ಸೂಚಿಸಿತು.
