2019ರಲ್ಲಿ ಮೋದಿ ಪ್ರಧಾನಿ ಆಗಲ್ಲ: ಚಂದ್ರಬಾಬು ನಾಯ್ಡು

Naidu says BJP will not come to power in 2019
Highlights

ದೇಶದಲ್ಲಿ ಪ್ರಾದೇಶಿಕ ಪಕ್ಷಗಳು ಮಹತ್ವ ಪಡೆದುಕೊಳ್ಳುತ್ತಿದ್ದು, ಬದಲಾದ ರಾಜಕೀಯ ಸನ್ನಿವೇಶದಲ್ಲಿ 2019ರ ಲೋಕಸಭೆ ಚುನಾವಣೆ ಐತಿಹಾಸಿಕವಾಗಿರಲಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಜಾತ್ಯಾತೀತ ಮನೋಭಾವದ ಪ್ರಾದೇಶಿಕ ಪಕ್ಷಗಳು ಒಂದುಗೂಡುತ್ತಿದ್ದು, 2019 ರಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಸಾಧ್ಯವಿಲ್ಲ ಎಂದು ನಾಯ್ಡು ಅಭಿಪ್ರಾಯಪಟ್ಟಿದ್ದಾರೆ. 

ವಿಜಯವಾಡಾ(ಮೇ.28): ದೇಶದಲ್ಲಿ ಪ್ರಾದೇಶಿಕ ಪಕ್ಷಗಳು ಮಹತ್ವ ಪಡೆದುಕೊಳ್ಳುತ್ತಿದ್ದು, ಬದಲಾದ ರಾಜಕೀಯ ಸನ್ನಿವೇಶದಲ್ಲಿ 2019 ರ ಲೋಕಸಭೆ ಚುನಾವಣೆ ಐತಿಹಾಸಿಕವಾಗಿರಲಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಜಾತ್ಯಾತೀತ ಮನೋಭಾವದ ಪ್ರಾದೇಶಿಕ ಪಕ್ಷಗಳು ಒಂದುಗೂಡುತ್ತಿದ್ದು, 2019ರಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಸಾಧ್ಯವಿಲ್ಲ ಎಂದು ನಾಯ್ಡು ಅಭಿಪ್ರಾಯಪಟ್ಟಿದ್ದಾರೆ. ಮೋದಿ ಕೇವಲ ಪ್ರಚಾರಪ್ರೀಯ ಪ್ರಧಾನಿಯಾಗಿದ್ದು, ಜನತೆ ತಮ್ಮ ಆಶೋತ್ತರಗಳನ್ನು ಈಡೇರಿಸಬಲ್ಲ ಪ್ರಾದೇಶಿಕ ಪಕ್ಷಗಳತ್ತ ದೃಷ್ಟಿ ನೆಟ್ಟಿದ್ದಾರೆ ಎಂದು ಅವರು ಹೇಳಿದರು.

ಪ್ರಧಾನಿ ಮೋದಿ 2019ರ ಲೋಕಸಭೆ ಚುನಾವಣೆ ಗೆಲ್ಲುವ ಹುಮ್ಮಸ್ಸಿನಲ್ಲಿದ್ದಾರೆ. ಆದರೆ ಜನ ಅವರ ಬಣ್ಣದ ಮಾತುಗಳಿಗೆ ಮರುಳಾಗುವುದಿಲ್ಲ ಎಂದ ನಾಯ್ಡು, ಪ್ರಾದೇಶಿಕ ಪಕ್ಷಗಳ ಒಗ್ಗೂಡುವಿಕೆ ಮೋದಿ ಅವರಿಗೆ ನಡುಕ ಹುಟ್ಟಿಸಿದೆ ಎಂದು ವ್ಯಂಗ್ಯವಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಏಕಾಂಗಿಯಾಗಿ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ ಎಂದಿರುವ ಸಿಎಂ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಕಾಂಗ್ರೆಸ್ ಪ್ರಾದೇಶಿಕ ಪಕ್ಷಗಳ ಜೊತೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

loader