ಉದ್ಯಮಿ ಲೋಕನಾಥನ್ ಪುತ್ರ ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಜೈಲು ಸೇರಿರುವ ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಸೋಮವಾರ ಮುಂದುವರೆ ಯಲಿದೆ.
ಬೆಂಗಳೂರು: ಉದ್ಯಮಿ ಲೋಕನಾಥನ್ ಪುತ್ರ ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಜೈಲು ಸೇರಿರುವ ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ಸೋಮವಾರ ಮುಂದುವರೆ ಯಲಿದೆ.
ಅರ್ಜಿಯ ಸಂಬಂಧ ಶುಕ್ರವಾರ ವಿಚಾರಣೆ ನಡೆಸಿದ್ದ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠ ನ್ಯಾಯಾಲಯದ ಕಲಾಪದ ಸಮಯ ಮುಕ್ತಾಯವಾದ ಪರಿಣಾಮ ವಿಚಾರಣೆ ಮುಂದೂಡಿದ್ದು, ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದುವರೆಯಲಿದೆ. ಮಾ.19ರಿಂದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃದಲ್ಲಿರುವ ಆರೋಪಿ ನಲಪಾಡ್ಗೆ ಜೈಲಾ, ಬೇಲಾ ಎಂಬ ಅಂಶ ಸೋಮವಾರ ಗೊತ್ತಾಗಲಿದೆ.
