ಇನ್ನೂ 13 ದಿನ ನಲಪಾಡ್‌ಗೆ ಬಿಡುಗಡೆ ಇಲ್ಲ

First Published 5, Apr 2018, 10:30 AM IST
Nalapad Case Release 13 Days
Highlights

ಉದ್ಯಮಿ ಲೋಕನಾಥ್‌ ಪುತ್ರ ವಿದ್ವತ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣದ ಸಂಬಂಧ ಶಾಂತಿನಗರ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನಗರದ 8ನೇ ಎಸಿಎಂಎಂ ನ್ಯಾಯಾಲಯ ಏ.17ರ ವರೆಗೂ ವಿಸ್ತರಿಸಿ ಆದೇಶಿಸಿದೆ.

ಬೆಂಗಳೂರು : ಉದ್ಯಮಿ ಲೋಕನಾಥ್‌ ಪುತ್ರ ವಿದ್ವತ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣದ ಸಂಬಂಧ ಶಾಂತಿನಗರ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನಗರದ 8ನೇ ಎಸಿಎಂಎಂ ನ್ಯಾಯಾಲಯ ಏ.17ರ ವರೆಗೂ ವಿಸ್ತರಿಸಿ ಆದೇಶಿಸಿದೆ.

ಆರೋಪಿಗೆ ಈ ಹಿಂದೆ ವಿಧಿಸಿದ್ದ ಬಂಧನದ ಅವಧಿ ಮುಕ್ತಾಯವಾದ ಪರಿಣಾಮ ಪರಪ್ಪನ ಅಗ್ರಹಾರದಿಂದ ವಿಡಿಯೋ ಕಾನ್ಫೆರೆನ್ಸ್‌ ಮೂಲಕ ವಿಚಾರಣೆ ನಡೆಸಿದ ನ್ಯಾಯಾಧೀಶರು, ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದರು.

ಫೆ.17ರಂದು ಮಧ್ಯರಾತ್ರಿ ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್‌ ಮೇಲೆ ನಲಪಾಡ್‌ ಮತ್ತು ಆತನ ಸಹಚರರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಪ್ರಕರಣದ ಸಂಬಂಧ ಆರೋಪಿಗಳನ್ನು ಬಂಧಿಸಿದ್ದ ಕಬ್ಬನ್‌ ಪಾರ್ಕ್ ಪೊಲೀಸರು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

loader