ಈಗಾಗಲೇ 10 ದಿನಗಳಿಂದ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ನಲಪಾಡ್ ಹಾಗೂ ಆತನ ಗ್ಯಾಂಗ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದೆ.

ಬೆಂಗಳೂರು(ಮಾ.02): ವಿದ್ವತ್ ಮೇಲೆ ಹಲ್ಲೆ ನಡೆಸಿದ್ದ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 63ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಹೀಗಾಗಿ ನಲಪಾಡ್'ಗೆ ಜೈಲೇ ಗತಿಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನ್ಯಾಯಧೀಶ ಪರಮೇಶ್ವರ ಪ್ರಸನ್ನ ಅವರು ಇದೊಂದು ಗಂಭೀರ ಪ್ರಕರಣ ಎಂದು ಪರಿಗಣಿಸಿ ನಲಪಾಡ್ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಇದುವರೆಗೆ ಹಲ್ಲೆಗೊಳಗಾದ ವಿದ್ವತ್ ಹೇಳಿಕೆಯನ್ನು ಪೊಲೀಸರು ಪಡೆದಿಲ್ಲ

ಈಗಾಗಲೇ 10 ದಿನಗಳಿಂದ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ನಲಪಾಡ್ ಹಾಗೂ ಆತನ ಗ್ಯಾಂಗ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದೆ.