ಕಾರ್ತಿಕ್ ರಾಜ್ ಕೊಲೆ ಆರೋಪಿಗಳ ಬಂಧನ ವಿಳಂಬ ಖಂಡಿಸಿ ಕೊಣಾಜೆ ಪೊಲೀಸ್ ಸ್ಟೇಷನ್ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ರು
ಮಂಗಳೂರು(ಜ.1): ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ವಿವಾದಾತ್ಮಕ ಹೇಳಿಕೆ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಎರಡು ತಿಂಗಳ ಹಿಂದೆ ನಡೆದ ಬಿಜೆಪಿ ಕಾರ್ಯಕರ್ತ ಕಾರ್ತಿಕ್ ರಾಜ್ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ರೆ ಇಡೀ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕಾರ್ತಿಕ್ ರಾಜ್ ಕೊಲೆ ಆರೋಪಿಗಳ ಬಂಧನ ವಿಳಂಬ ಖಂಡಿಸಿ ಕೊಣಾಜೆ ಪೊಲೀಸ್ ಸ್ಟೇಷನ್ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಂಸದ, ನಳೀನ್ಕುಮಾರ್ ಕಟೀಲ್, ಪೊಲೀಸ್ ಇಲಾಖೆ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
ಕೇರಳದ ಭಯೋತ್ಪಾದನಾ ಚಟುವಟಿಕೆ ಕರಾವಳಿ ಜಿಲ್ಲೆಗೆ ವ್ಯಾಪಿಸಿದ್ದು ಉಳ್ಳಾಲ ವ್ಯಾಪ್ತಿಯಲ್ಲಿ ನಡೆಯುವ ಹಿಂಸಾತ್ಮಕ ಘಟನೆಯಲ್ಲಿ ಇದರ ಕೈವಾಡವಿದೆ ಅಂತ ಆರೋಪಿಸಿದರು. ಹತ್ತು ದಿನದೊಳಗೆ ಕಾರ್ತಿಕ್ ರಾಜ್ ಕೊಲೆ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಾಕಲು ನಮಗೆ ಗೊತ್ತಿದೆ ಅಂತ ಗುಡುಗಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರೊಬ್ಬರು ಬೆಂಕಿ ಹಚ್ಚುವ ಮಾತನಾಡಿದ್ದು ತೀವ್ರ ವಿವಾದಕ್ಕೆ ಗುರಿಯಾಗಿದೆ.
