ರಾಜ್ಯದ ಒಂದು ಕೃಷಿ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹೆಸರಿಡಬೇಕೆಂದು ‘ಹಸಿರು ಪ್ರತಿಷ್ಠಾನ’ ಒತ್ತಾಯಿಸಿದೆ.
ಬೆಂಗಳೂರು: ರಾಜ್ಯದ ಒಂದು ಕೃಷಿ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹೆಸರಿಡಬೇಕೆಂದು ‘ಹಸಿರು ಪ್ರತಿಷ್ಠಾನ’ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಕೆ.ಜಿ. ಕುಮಾರ್, ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಿಯಾಗಿ ಕರ್ನಾಟಕಕ್ಕಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಕೃಷಿ, ಹೈನುಗಾರಿಕೆ, ನಗರಾಭಿವೃದ್ಧಿ, ನೀರಾವರಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ಅಪಾರವಾದ ಕೊಡುಗೆ ನೀಡಿದ್ದಾರೆ, ಎಂದು ಹೇಳಿದರು.
ಎಚ್.ಡಿ. ದೇವೇಗೌಡರು ರಾಜಕೀಯ ಜೀವನಕ್ಕೆ ಕಾಲಿರಿಸಿ 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದಾದರೂ ಒಂದು ಕೃಷಿ ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನು ನಾಮಕರಣ ಮಾಡಬೇಕು. ತುಮಕೂರಿಗೆ ಅವರು ಕಲ್ಪಿಸಿರುವ ನೀರಾವರಿ ಸೌಲಭ್ಯಗಳು, ಇತರೆ ಯೋಜನೆಗಳನ್ನು ಪರಿಗಣಿಸಿ ತುಮಕೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಗೌರವ ನೀಡಬೇಕು ಎಂದು ಅವರು ಆಗ್ರಹಿಸಿದರು.
