ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಾ ಕೂಡ ಪರಮೇಶ್ವರ್ ಆ ರೀತಿ ಹೇಳಿವವರಲ್ಲ. ಯಾವ ಕಾರಣಕ್ಕೆ ಬರುತ್ತಾರೆ ಎಂಬುದನ್ನು ಅವರನ್ನೇ ಕೇಳಿಕೊಳ್ಳಿ ಎಂದರು.
ಮೈಸೂರು(ಮಾ.19): ನಂಜನಗೂಡು ಬೈಲ್ ಎಲೆಕ್ಷನ್ ಸಮರ ಜೋರಾಗತೊಡಗಿದ್ದು,ಆರೋಪ ಪ್ರತ್ಯಾರೋಪಗಳು ಜೋರಾಗಿಯೇ ನಡೆದಿವೆ. ಬಿಜೆಪಿಯ 25 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹೇಳಿಕೆಯನ್ನು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಲೇವಡಿ ಮಾಡಿದ್ದಾರೆ. ಹಿಂದೆ ರಾಜ್ಯದಲ್ಲಿ ದಲಿತ ಸಿಎಂ ಕೂಗು ಬಂದಾಗ ದಲಿತ ಸಿಎಂ ಮಾಡಲು ಹೊರಟ ಪರಮೇಶ್ವರ್ ಜೊತೆಗೆ 5 ಜನ ಎಂಎಲ್ಎ ಕರೆತರಲು ಆಗಲಿಲ್ಲ. ಈಗ 25 ಜನ ಬಿಜೆಪಿ ಶಾಸಕರನ್ನು ಕರೆತರ್ತಾನಾ ಅಂತ ಪ್ರಸಾದ್ ಪರಮೇಶ್ವರ್ ಅವರ ಹೇಳಿಕೆಯನ್ನು ಲೇವಡಿ ಮಾಡಿದ್ದಾರೆ. ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಾ ಕೂಡ ಪರಮೇಶ್ವರ್ ಆ ರೀತಿ ಹೇಳಿವವರಲ್ಲ. ಯಾವ ಕಾರಣಕ್ಕೆ ಬರುತ್ತಾರೆ ಎಂಬುದನ್ನು ಅವರನ್ನೇ ಕೇಳಿಕೊಳ್ಳಿ ಎಂದರು. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
