ಗುಜರಾತ್ ಚುನಾವಣೆಗೆ ವಾರವಷ್ಟೇ ಬಾಕಿ ಉಳಿದಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪ್ರತಿಷ್ಠೆಯ ಕಣವಾಗಿದೆ. ಹಾಗಾಗಿ ಉಭಯ ಪಕ್ಷಗಳು ಬಿರುಸಿನ ಪ್ರಚಾರ, ರ್ಯಾಲಿ ನಡೆಸುತ್ತಿವೆ. ಪರಸ್ಪರ ಟೀಕೆ, ಕೆಸರೆರಚಾಟದ, ಆರೋಪ ಮಾಡುವ ಮೂಲಕ ಮತದಾರರನ್ನು ತಮ್ಮತ್ತ ಸೆಳೆಯುವಲ್ಲಿ ಪ್ರಯತ್ನಿಸುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಹಾಗೂ ಪತೇದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ರ್ಯಾಲಿಯಲ್ಲಿ ಭಾಗವಹಿಸಿದರು.
ಗುಜರಾತ್ (ನ.29): ಗುಜರಾತ್ ಚುನಾವಣೆಗೆ ವಾರವಷ್ಟೇ ಬಾಕಿ ಉಳಿದಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪ್ರತಿಷ್ಠೆಯ ಕಣವಾಗಿದೆ. ಹಾಗಾಗಿ ಉಭಯ ಪಕ್ಷಗಳು ಬಿರುಸಿನ ಪ್ರಚಾರ, ರ್ಯಾಲಿ ನಡೆಸುತ್ತಿವೆ. ಪರಸ್ಪರ ಟೀಕೆ, ಕೆಸರೆರಚಾಟದ, ಆರೋಪ ಮಾಡುವ ಮೂಲಕ ಮತದಾರರನ್ನು ತಮ್ಮತ್ತ ಸೆಳೆಯುವಲ್ಲಿ ಪ್ರಯತ್ನಿಸುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಹಾಗೂ ಪತೇದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ರ್ಯಾಲಿಯಲ್ಲಿ ಭಾಗವಹಿಸಿದರು.
ರಾಹುಲ್ ಗಾಂಧಿ ರ್ಯಾಲಿಯಲ್ಲಿ ಭಾಷಣ ಮಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತ್ಯಾರೋಪ ಮಾಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ. ಕೇವಲ 10 ದಿನಗಳೊಳಗೆ ನಾವು ರೈತರ ಸಾಲ ಮನ್ನಾ ಮಾಡುತ್ತೇವೆ. ನೀವೇನು ಬಯಸುತ್ತೀರೋ ಹಾಗೆಯೇ ನಾವು ಆಡಳಿತ ನಡೆಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದರು.
ಇನ್ನು ಮುಂದುವರೆದು, ಕಳೆದ 2 ದಶಕಗಳಲ್ಲಿ ಗುಜರಾತನ್ನು ಮೋದಿ ಉದ್ಯಮಿಗಳಿಗೆ ಮಾರಾಟ ಮಾಡಿದ್ದಾರೆ. ಡಿಮಾನೆಟೈಸೇಶನ್ ಸಂದರ್ಭದಲ್ಲಿ ಇಡೀ ದೇಶ ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದರು. ಅವರ ಸೂಟು-ಬೂಟು ಸ್ನೇಹಿತರಾದ ಅದ್ನಾನಿಯವರು ಸಾಲಿನಲ್ಲಿ ನಿಂತಿದ್ದನ್ನು ನೀವು ನೋಡಿದ್ದೀರಾ ಎಂದು ಜನರನ್ನು ಪ್ರಶ್ನಿಸಿದರು.
