ದೂರವಾಣಿಯಲ್ಲಿ ಮಾತನಾಡಿದ ವಿಷಯಗಳ ಬಗ್ಗೆ ದೇವೇಗೌಡರು ಬಹಿರಂಗಪಡಿಸಿಲ್ಲ

ಬೆಂಗಳೂರು(ಅ.02): ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮುಂಜಾನೆ ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಮೋದಿ ಜೊತೆ ಕೆಲ ನಿಮಿಷಗಳ ಕಾಲ ಮಾತನಾಡಿದ ದೇವೇಗೌಡರು, ನೀರು ಹಂಚಿಕೆ ಮತ್ತು ನಿರ್ವಹಣಾ ಮಂಡಳಿ ರಚನೆ ಸಂಬಂಧ ಚರ್ಚೆ ನಡೆಸಿದ್ದಾರೆ. ದೂರವಾಣಿಯಲ್ಲಿ ಮಾತನಾಡಿದ ವಿಷಯಗಳ ಬಗ್ಗೆ ದೇವೇಗೌಡರು ಬಹಿರಂಗಪಡಿಸಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಕುರಿತು, ಪ್ರತಿಕ್ರಿಯಿಸಿದ ದೇವೇಗೌಡರು, ಪ್ರಧಾನಿ ಮೋದಿಯವರು ಹಾಗೂ ಸಿಎಂ ಸಿದ್ದರಾಮಯ್ಯನ ಮೇಲೆ ವಿಶ್ವಾಸವಿದೆ. ನಾಳೆ ವಿಧಾನಮಂಡಲದ ಉಭಯ ಸದನಗಳಲ್ಲಿ ಮೂರು ರಾಜಕೀಯ ಪಕ್ಷಗಳು ಏನು ನಿರ್ಧಾರ ಕೈಗೊಳ್ಳುತ್ತವೆ ನೋಡೋಣ ಅಂತಾ ಹೇಳಿದ್ದಾರೆ.