ಕೊಚ್ಚಿ/ತಿರುಪತಿ[ಜೂ.07]: ಪ್ರಧಾನಿ ನರೇಂದ್ರ ಮೋದಿ ಈ ವಾರ ದಕ್ಷಿಣ ಭಾರತದಲ್ಲಿ ಟೆಂಪಲ್‌ ರನ್‌ ನಡೆಸಲಿದ್ದು, ಪ್ರಸಿದ್ಧ ದೇವಸ್ಥಾನಗಳಾದ ಕೇರಳದ ಗುರುವಾಯೂರು ಶ್ರೀಕೃಷ್ಣ ಹಾಗೂ ಆಂಧ್ರದ ತಿರುಪತಿ, ತಿರುಮಲ ವೆಂಕಟೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ತಮ್ಮ ಎರಡನೇ ಅವಧಿಯಲ್ಲಿ ದಕ್ಷಿಣ ಭಾರತದ ಈ ದೇವಸ್ಥಾನಗಳಿಗೆ ಅವರ ಮೊದಲ ಭೇಟಿ ಇದಾಗಿದೆ. ಶುಕ್ರವಾರ ತಡರಾತ್ರಿ ಗುರುವಾಯೂರಿಗೆ ಆಗಮಿಸಿ ವಾಸ್ತವ್ಯ ಮಾಡಿ ಶನಿವಾರ ಬೆಳಗ್ಗೆ ಶ್ರೀ ಕೃಷ್ಣನ ದರ್ಶನ ಪಡೆಯಲಿದ್ದಾರೆ. ಬಳಿಕ ಭಾನುವಾರ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ತಿರುಮಲ ಭೇಟಿ ವೇಳೆ ಆಂಧ್ರ ಸಿಎಂ ವೈಎಸ್‌ಆರ್‌ ಜಗನ್ಮೋಹನ್‌ ರೆಡ್ಡಿ, ರಾಜ್ಯಪಾಲ ಇಎಸ್‌ಎಲ್‌ ನರಸಿಂಹನ್‌ ಉಪಸ್ಥಿತರಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಅಗತ್ಯ ಭದ್ರತಾ ಮತ್ತಿತರ ಕ್ರಮಗಳಿಗೆ ಸೂಚನೆ ನೀಡಲಾಗಿದೆ.