ನವದೆಹಲಿ(ಏ.14): ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ 128ನೇ ಜನ್ಮ ಜಯಮತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ವಿವಿಧೆಡೆ ಗಣ್ಯರು ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

ನವದೆಹಲಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ, ದೇಶಕ್ಕೆ ಸಂವಿಧಾನ ನೀಡಿದ ಅಂಬೇಡ್ಕರ್ ಶತಮಾನಗಳ ಕಾಲ ಭಾರತೀಯರ ಹೃದಯದಲ್ಲಿ ಜೀವಂತವಾಗಿರಲಿದ್ದಾರೆ ಎಂದು ಹೇಳಿದರು.

ಇನ್ನು ಬೆಂಗಳೂರಿನಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ಗಣ್ಯರು ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

ಮಹಾರಾಷ್ಟ್ರದಲ್ಲಿ ಸಿಎಂ ದೇವೇಂದ್ರ ಫಡ್ನವೀಸ್ ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಅಂಬೇಡ್ಕರ್ ಸಂವಿಧಾನದ ಮೂಲಕ ನಮ್ಮೆಲ್ಲರಲ್ಲೂ ಉಸಿರಾಡುತ್ತಿದ್ದಾರೆ ಎಂದು ಹೇಳಿದರು.