ಸಿನಿಮಾ ಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆಯನ್ನು ನುಡಿಸಬೇಕು ಎಂದು ಸುಪ್ರೀಂ ತೀರ್ಪು ನೀಡಿದ ಬೆನ್ನಲ್ಲೆ ಕೋರ್ಟ್ ಪ್ರಾರಂಭಕ್ಕೂ ಮುನ್ನ ನುಡಿಸುವುದನ್ನು ಕಡ್ಡಾಯಗೊಳಿಸಿ ಎಂದು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದೆ.
ನವದೆಹಲಿ (ಡಿ.02): ಸಿನಿಮಾ ಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆಯನ್ನು ನುಡಿಸಬೇಕು ಎಂದು ಸುಪ್ರೀಂ ತೀರ್ಪು ನೀಡಿದ ಬೆನ್ನಲ್ಲೆ ಕೋರ್ಟ್ ಪ್ರಾರಂಭಕ್ಕೂ ಮುನ್ನ ನುಡಿಸುವುದನ್ನು ಕಡ್ಡಾಯಗೊಳಿಸಿ ಎಂದು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದೆ.
ದೇಶಾದ್ಯಂತ ಇರುವ ನ್ಯಾಯಾಲಯಗಳಲ್ಲಿ ವಿಚಾರಣೆ ಪ್ರಾರಂಭಕ್ಕೂ ಮುನ್ನ ರಾಷ್ಟ್ರಗೀತೆಯನ್ನು ನುಡಿಸಬೇಕು ಎನ್ನುವುದನ್ನು ಕಡ್ಡಾಯಗೊಳಿಸಿ ಎಂದು ವಕೀಲರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ ಈ ಅರ್ಜಿಯನ್ನು ವಜಾಗೊಳಿಸಿದೆ.
ಅರ್ಜಿ ಸಲ್ಲಿಸಿದ ವಕೀಲ “ ಈ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿಗಳನ್ನು ದೇಶದ್ರೋಹಿಗಳು ಅಂತ ಕರೆಯಲೇ? ಇದೆಂಥಾ ದ್ವಂದ್ವ ನಿಲುವು? ಸಿನಿಮಾ ಮಂದಿರಗಳಲ್ಲಿ ನುಡಿಸುವುದಾರೆ ಕೋರ್ಟ್
ಪ್ರಾರಂಭಕ್ಕೂ ಮುನ್ನ ಯಾಕೆ ನುಡಿಸಬಾರದು? ಎಂದು ಪ್ರಶ್ನಿಸಿದ್ದಾರೆ.
