ಕಾರು ಮರಕ್ಕೆ ಗುದ್ದಿ ರಾಷ್ಟ್ರೀಯ ಕಾರ್ ರೇಸಿಂಗ್ ಚಾಂಪಿಯನ್ ಅಶ್ವಿನ್ ಸುಂದರ್ ಹಾಗೂ ಅವರ ಪತ್ನಿ ನಿವೇದಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚೆನ್ನೈ (ಮಾ.18): ಕಾರು ಮರಕ್ಕೆ ಗುದ್ದಿ ನ್ಯಾಷನಲ್ ಕಾರ್ ರೇಸಿಂಗ್ ಚಾಂಪಿಯನ್ ಅಶ್ವಿನ್ ಸುಂದರ್ ಹಾಗೂ ಅವರ ಪತ್ನಿ ನಿವೇದಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಂದು ಬೆಳಗಿನ ಜಾವ 3.30 ಕ್ಕೆ ಅಪಘಾತ ಸಂಭವಿಸಿದ್ದು ಕಾರಿನ ಒಳಗೆ ಸಿಲುಕಿಕೊಂಡು ಹೊರಬರಲಾಗದೇ ದಂಪತಿಗಳಿಬ್ಬರೂ ಅಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಪಘಾತ ಸಂಭವಿಸಿ ಕಾರಿಗೆ ಬೆಂಕಿ ಹತ್ತಿ ಉರಿಯುತ್ತಿದ್ದರೂ ಸಾರ್ವಜನಿಕರು ಮೂಕ ಪ್ರೇಕ್ಷಕರಾಗಿ ನೋಡುತ್ತಿದ್ದರು . ವಾಹನದ ನೊಂದಣಿ ಸಂಖ್ಯೆ ಮೂಲಕ ಇದು ಕಾರು ರೇಸಿಂಗ್ ಚಾಂಪಿಯನ್ ಅಶ್ವಿನ್ ಸುಂದರ್ ಗೆ ಸಂಬಂಧಿಸಿದ್ದು ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.
