ದೌರ್ಜನ್ಯಕ್ಕೆ ಒಳಗಾದ ಮಕ್ಕಳನ್ನು ಹೇಗೆ ಆರೈಕೆ ಮಾಡಬೇಕು. ಅವರನ್ನು ಹೇಗೆ ಸೂಕ್ಷ್ಮತೆಯಿಂದ ಮಾತಾಡಿಸಬೇಕು. ವಿಚಾರಣೆಯನ್ನು ಹೇಗೆ ಮಾಡಬೇಕು ಅನ್ನುವುದರ ಬಗ್ಗೆ ಗಣ್ಯರು ಸಮಗ್ರವಾಗಿ ಚರ್ಚಿಸಿದರು.

ಬೆಂಗಳೂರು(ಫೆ.04): ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ 2012ಕ್ಕೆ ತಿದ್ದುಪಡಿ ತರಲು ಕಾರ್ಯಾಗಾರ ನಡೆಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಸ್ತೆ, ಬಸ್ ಗಳಲ್ಲಿ, ಶಾಲೆಗಳಲ್ಲಿ ಮಕ್ಕಳು ಲೈಂಗಿಕ ಕಿರುಕುಳಕ್ಕೊಳಗಾಗುತ್ತಿದ್ದಾರೆ. ಆದರೆ ತಪ್ಪಿತಸ್ಥರಿಗೆ ಸರಿಯಾದ ಶಿಕ್ಷೆ ಮಾತ್ರ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ 2012 ರ ಕಾಯ್ದೆಯನ್ನು ಇನ್ನಷ್ಟು ಕಠಿಣ ಹಾಗೂ ಇನ್ನು ಕೆಲ ನಿಯಮಗಳನ್ನು ತರುವ ಬಗ್ಗೆ ಕಾರ್ಯಾಗಾರದಲ್ಲಿ ಚರ್ಚಿಸಲಾಯಿತು.

ದೌರ್ಜನ್ಯಕ್ಕೆ ಒಳಗಾದ ಮಕ್ಕಳನ್ನು ಹೇಗೆ ಆರೈಕೆ ಮಾಡಬೇಕು. ಅವರನ್ನು ಹೇಗೆ ಸೂಕ್ಷ್ಮತೆಯಿಂದ ಮಾತಾಡಿಸಬೇಕು. ವಿಚಾರಣೆಯನ್ನು ಹೇಗೆ ಮಾಡಬೇಕು ಅನ್ನುವುದರ ಬಗ್ಗೆ ಗಣ್ಯರು ಸಮಗ್ರವಾಗಿ ಚರ್ಚಿಸಿದರು. ನಾಳೆಯೂ ಸಂವಾದ ಮುಂದುವರಿಯಲಿದ್ದು, ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಸಂಕ್ಷಿಪ್ತವಾಗಿ ಉಲ್ಲೇಖಿಸಿ ಸರ್ಕಾರಕ್ಕೆ ವರದಿ ನೀಡಲಾಗುತ್ತದೆ.

ಕಾರ್ಯಾಗಾರದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಸಂಘಟನೆಗಳು,ಪೊಲೀಸ್ ಅಧಿಕಾರಿಗಳು, ಪ್ರಸಿದ್ಧ ವಕೀಲರು ಹಾಗೂ ತಮಿಳುನಾಡು, ಮಹಾರಾಷ್ಟ್ರ, ಹರಿಯಾಣ, ಮುಂಬೈನ ನ್ಯಾಯಾಮೂರ್ತಿಗಳು ಭಾಗಿಯಾಗಿದ್ದರು.