ಸ್ಥಳೀಯ ಸಂಸ್ಥೆ ಎಲೆಕ್ಷನ್ ಬಹಿಷ್ಕಾರ
ವಿಶೇಷ ಸವಲತ್ತು ಒದಗಿಸುವ ಸಂವಿಧಾನದ 35 -ಎ ಪರಿಚ್ಛೇದ ರಕ್ಷಿಸಬೇಕು ಎಂದು ಆಗ್ರಹಿಸಿ ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷ ಸ್ಥಳೀಯ ಸಂಸ್ಥೆ ಹಾಗೂ ಪಂಚಾಯಿತಿ ಚುನಾವಣೆಗಳನ್ನು ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದೆ.
ಶ್ರೀನಗರ: ಜಮ್ಮು-ಕಾಶ್ಮೀರದ ಕಾಯಂ ನಿವಾಸಿಗಳಿಗೆ ವಿಶೇಷ ಸವಲತ್ತು ಒದಗಿಸುವ ಸಂವಿಧಾನದ 35 -ಎ ಪರಿಚ್ಛೇದ ರಕ್ಷಿಸಬೇಕು ಎಂದು ಆಗ್ರಹಿಸಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷ ಸ್ಥಳೀಯ ಸಂಸ್ಥೆ ಹಾಗೂ ಪಂಚಾಯಿತಿ ಚುನಾವಣೆಗಳನ್ನು ಬಹಿಷ್ಕರಿಸುವ ನಿರ್ಧಾರ
ಕೈಗೊಂಡಿದೆ. ಈ ಪರಿಚ್ಛೇದದ ವಿರುದ್ಧ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಕೆಯಾಗಿದೆ.
ಹೀಗಾಗಿ 35 -ಎ ಪರಿಚ್ಛೇದ ರಕ್ಷಣೆ ಕುರಿತು ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸದೇ ಹೋದಲ್ಲಿ ನಗರ ಸ್ಥಳೀಯ ಸಂಸ್ಥೆ ಹಾಗೂ ಪಂಚಾಯಿತಿ ಚುನಾವಣೆ ಬಹಿಷ್ಕರಿಸಲು ನ್ಯಾಷನಲ್ ಕಾನ್ಫರೆನ್ಸ್ ನ ಕೋರ್ ಸಮಿತಿ ಸರ್ವಾನುಮತದ ನಿರ್ಣಯ ಕೈಗೊಂಡಿದೆ.