ನ್ಯಾಷನಲ್ ಹೆರಾಲ್ಡ್ ಪ್ರಕರಣದ ತೀರ್ಪು ಕಾಯ್ದಿರಿಸಿದ ಪಟಿಯಾಲಾ ಹೌಸ್
ನ್ಯಾಷನಲ್ ಹೆರಾಲ್ಡ್ ಪ್ರಕರಣದ ತೀರ್ಪನ್ನು ಪಟಿಯಾಲಾ ಹೌಸ್ ಕೋರ್ಟ್ ಕಾಯ್ದಿರಿಸಿದೆ.
ನವದೆಹಲಿ (ಡಿ.09): ನ್ಯಾಷನಲ್ ಹೆರಾಲ್ಡ್ ಪ್ರಕರಣದ ತೀರ್ಪನ್ನು ಪಟಿಯಾಲಾ ಹೌಸ್ ಕೋರ್ಟ್ ಕಾಯ್ದಿರಿಸಿದೆ.
ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಕಾಂಗ್ರೆಸ್ ಪಕ್ಷ ಹಾಗೂ ಅಸೋಸಿಯೇಶನ್ ಜರ್ನಲ್ಸ್ ಲಿಮಿಟೆಡ್ ಗೆ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೋರಿ ಮನವಿ ಸಲ್ಲಿಸಿದ್ದರು. ಹಾಗಾಗಿ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದ್ದು ಡಿ.26 ಕ್ಕೆ ನೀಡಲಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಸಂಬಂಧಪಟ್ಟ ದಾಖಲೆಗಳನ್ನು ತಡೆಹಿಡಿದಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಅರ್ಜಿಯಲ್ಲಿ ಆರೋಪಿಸಿದ್ದಾರೆ.