ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಪಟ್ಟ 11 ಮಂದಿ ಸಾಕ್ಷಿಗಳನ್ನು ಕರೆಸಿಕೊಳ್ಳಿ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ದೆಹಲಿ ನ್ಯಾಯಾಲಯಕ್ಕೆ ಒತ್ತಾಯಿಸಿದ್ದಾರೆ.

ನವದೆಹಲಿ (ಮೇ.15): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಪಟ್ಟ 11 ಮಂದಿ ಸಾಕ್ಷಿಗಳನ್ನು ಕರೆಸಿಕೊಳ್ಳಿ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ದೆಹಲಿ ನ್ಯಾಯಾಲಯಕ್ಕೆ ಒತ್ತಾಯಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಪಟ್ಟ ಅದರಲ್ಲೂ ಜರ್ನಲ್ ಪ್ರೈವೇಟ್ ಲಿಮಿಟೆಡ್ ಗೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯ ತರಿಸಿಕೊಳ್ಳಲು ಅನುಮತಿ ನೀಡಿದ್ದೇನೆ. ದಾಖಲೆಗಳ ಸತ್ಯಾಸತ್ಯತೆಯನ್ನು ಸಾಬೀತುಪಡಿಸಲು ನಾನು ಇಚ್ಚಿಸುತ್ತೇನೆ. ಹಾಗಾಗಿ 11 ಮಂದಿ ಸಾಕ್ಷಿಗಳನ್ನು ಕರೆಸಿ ಪಟ್ಟಿಯನ್ನು ತಯಾರಿಸಿ. ಬೇಸಿಗೆ ರಜೆ ಕಳೆದ ನಂತರ ಜುಲೈ 1 ರಿಂದ ನಾವು ವಿಚಾರಣೆ ನಡೆಸಲಿದ್ದೇವೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಇತ್ತೀಚಿಗೆ ದೆಹಲಿ ನ್ಯಾಯಾಲಯ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆಗೆ ತನಿಖೆ ನಡೆಸಲು ಸಮ್ಮತಿ ಸೂಚಿಸಿತ್ತು.