ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕಾಂಗ್ರೆಸ್‌ಗೆ ಭಾರಿ ಹಿನ್ನಡೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ಜಯ ಸಿಕ್ಕಿದ್ದು, ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯಾಗಿದೆ. ಏನದು ಪ್ರಕರಣ?
ನವದೆಹಲಿ, [ಡಿ. 21]: ನ್ಯಾಷನಲ್ ಹೆರಾಲ್ಡ್ ಹಣ ದುರುಪಯೋಗ ಪ್ರಕರಣದಲ್ಲಿ ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯಾಗಿದೆ. ‘ಹೆರಾಲ್ಡ್ ಹೌಸ್’ ಅನ್ನು ತಕ್ಷಣ 2 ವಾರದಲ್ಲಿ ಖಾಲಿ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶ ನೀಡಿದೆ.
56 ವರ್ಷ ಅವಧಿಯ ಭೋಗ್ಯದ ಕರಾರು ಬಗ್ಗೆ ತಕರಾರು ತೆಗೆದು ಕೇಂದ್ರ ಸರ್ಕಾರವು ನ್ಯಾಷನಲ್ ಹೆರಾಲ್ಡ್ ಮಾಲೀಕ ಸಂಸ್ಥೆಯಾದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL)ಗೆ ‘ಹೆರಾಲ್ಡ್ ಹೌಸ್’ ತೆರವು ಗೊಳಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರ್ಟ್ ಮೊರೆ ಹೋಗಿತ್ತು.
ನ್ಯಾಷನಲ್ ಹೆರಾಲ್ಡ್‌ಗೆ ಸೇರಿದ ನಿವೇಶನ ಜಪ್ತಿ
ಇದನ್ನು ಪುರಸ್ಕರಿಸಿರುವ ಕೋರ್ಟ್, ಇಂದು [ಶುಕ್ರವಾರ] ವಿಚಾರಣೆ ನಡೆಸಿದ್ದು, 2 ವಾರದಲ್ಲಿ ‘ಹೆರಾಲ್ಡ್ ಹೌಸ್’ ಭವನವನ್ನು ಖಾಲಿ ಮಾಡುವಂತೆ ಆದೇಶ ಹೊರಡಿಸಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತಿತರರು ಪಕ್ಷದ ನಿಧಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ.
ಅಷ್ಟೇ ಅಲ್ಲದೇ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯಲ್ಲಿ ಅರ್ವ್ಯವಹಾರ ನಡೆಸಿದ್ದಾರೆ ಎಂದು ಸುಪ್ರೀಂಕೋರ್ಟ್ ಹಿರಿಯ ವಕೀಲ ಸುಬ್ರಮಣ್ಯಸ್ವಾಮಿ ದೂರು ದಾಖಲಿಸಿದ್ದರು.