ಇಲ್ಲಿನ ಹೊರಭಾಗದಲ್ಲಿರುವ ಸಿಂಘೂ ಸಮೀಪ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ನ್ಯಾಷನಲ್ ಲೆವೆಲ್ ಪವರ್ ಲಿಫ್ಟರ್ ಸಕ್ಷಮ್ ಯಾದವ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.

ನವದೆಹಲಿ (ಜ.07): ಇಲ್ಲಿನ ಹೊರಭಾಗದಲ್ಲಿರುವ ಸಿಂಘೂ ಸಮೀಪ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ನ್ಯಾಷನಲ್ ಲೆವೆಲ್ ಪವರ್ ಲಿಫ್ಟರ್ ಸಕ್ಷಮ್ ಯಾದವ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ನಾಲ್ವರು ಪವರ್ ಲಿಫ್ಟರ್'ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರಿಗೆ ಗಂಭೀರ ಗಾಯಗಳಾಗಿದೆ. ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದ ಸಕ್ಷಮ್ ಯಾದವ್'ರನ್ನು ಏಐಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಕಾರು ಹೈ ಸ್ಪೀಡ್'ನಲ್ಲಿತ್ತು. ಡಿವೈಡರ್'ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದವರು ಬರ್ತ್'ಡೇ ಪಾರ್ಟಿಯನ್ನು ಆಚರಿಸಿಕೊಂಡು ವಾಪಸ್ ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಆಲ್ಕೋಹಾಲ್ ಬಾಟಲ್'ಗಳು ಕಾರಿನಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.