ನವದೆಹಲಿ(ನ.02): ನವೆಂಬರ್ 9 ರಂದು ಪಾಕಿಸ್ತಾನದಲ್ಲಿ ನಡೆಯುವ ಕರ್ತಾರ್‌ಪುರ್ ಕಾರಿಡಾರ್‌ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡಬೇಕು ಎಂದು ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಮನವಿ ಮಾಡಿದ್ದಾರೆ.

ಕರ್ತಾರ್‌ಪುರ ಉದ್ಘಾಟನೆಗೆ ಸಿಂಗ್‌ಗೆ ಇಮ್ರಾನ್‌ ಅಧಿಕೃತ ಆಹ್ವಾನ!

ಕರ್ತಾರ್‌ಪುರ್: ಗುರು-ಭಕ್ತರನ್ನು ಬೆಸೆಯುವ ಅಪರೂಪದ ಕಾರಿಡಾರ್!

ಈ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರಿಗೆ ಪತ್ರ ಬರೆದಿರುವ ಸಿಧು, ಕರ್ತಾರ್‌ಪುರ್ ಸಾಹಿಬ್ ಕಾರಿಡಾರ್‌ ಉದ್ಘಾಟನೆಗೆ ಪಾಕಿಸ್ತಾನಕ್ಕೆ ಹೋಗಲು ಅನುಮತಿಗಾಗಿ ಮನವಿ ಮಾಡಿದ್ದಾರೆ.

ಕರ್ತಾರ್‌ಪುರ್ ಕಾರಿಡಾರ್ ಯೋಜನೆಗೆ ಸಹಿ ಹಾಕಿದ ಭಾರತ-ಪಾಕಿಸ್ತಾನ!

ಕಾರಿಡಾರ್ ಉದ್ಘಾಟನೆಗಾಗಿ ಪಾಕಿಸ್ತಾನ ತಮಗೆ ಆಹ್ವಾನ ನೀಡಿದ್ದು,  ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪಾಕ್ ಗೆ ತೆರಳಲು ಅನುಮತಿ ನೀಡಬೇಕು ಎಂದು ಸಿಧು ಮನವಿ ಮಾಡಿದ್ದಾರೆ.