ದೆಹಲಿ ಕಾಂಗ್ರೆಸ್ ಅಧ್ಯಕ್ಷ ಖುರ್ಚಿ ಏರಲು ಹೊರಟ ಸಿಧು| ಸಿಧು ಅವರನ್ನು ದೆಹಲಿ ಅಧ್ಯಕ್ಷರನ್ನಾಗಿ ನೇಮಿಸಲಿ ಕಾಂಗ್ರೆಸ್ ಉತ್ಸುಕ| ಪ್ರಿಯಾಂಕಾ ಗಾಂಧಿ ಭೇಟಿಯಾದ ನವಜೋತ್ ಸಿಂಗ್ ಸಿಧು| ಪಂಜಾಬ್ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನವಜೋತ್ ಸಿಧು| ದೆಹಲಿ ವಿಧಾನಸಭೆ ಚುನಾವಣೆಗೆ ರೆಡಿಯಾಗ್ತಿದೆ ಕಾಂಗ್ರೆಸ್|

ಚಂಡೀಗಡ್(ಜು.31): ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನವಜೋತ್ ಸಿಂಗ್ ಸಿಧು ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಳ್ಳುವ ಸಾಧ್ಯತೆ ಇದೆ.

ದೆಹಲಿ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಶೀಲಾ ದೀಕ್ಷಿತ್ ಇತ್ತೀಚಿಗೆ ನಿಧನರಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಇದೀಗ ಸಿಧು ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ಕೆಲವೇ ತಿಂಗಳಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಆಡಳಿರೂಢ ಆಮ್ ಆದ್ಮಿ ಪಾರ್ಟಿ ಹಾಗೂ ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ಸಿದ್ಧತೆ ಆರಂಭಿಸಿದೆ. 

ಈ ಹಿನ್ನೆಲೆಯಲ್ಲಿ ನವಜೋತ್ ಹೆಗಲಿಗೆ ದೆಹಲಿ ಉಸ್ತುವರಿ ನೀಡಲು ಕಾಂಗ್ರೆಸ್ ನಿರ್ಣಯಿಸಿದೆ ಎನ್ನಲಾಗಿದೆ. ಈಗಾಗಲೇ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವ ಸಿಧು, ಶೀಘ್ರದಲ್ಲೇ ದೆಹಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇನ್ನು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಧು ಅವರನ್ನು ನೇಮಿಸಿದರೆ ಕಾಂಗ್ರೆಸ್ ಚುನಾವಣೆಗೂ ಮೊದಲೇ ಸೋಲನ್ನೊಪ್ಪಿಕೊಂಡಂತೆ ಎಂಬ ವಿಶ್ಲೇಷಣೆಗೂ ಕೊರತೆಯೇನಿಲ್ಲ.