ಚಂಡಿಗಡ್ (ಸೆ.14): ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಭಾರತೀಯ ಜನತಾ ಪಕ್ಷಕ್ಕೆ ಇಂದು ರಾಜಿನಾಮೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

"ರಾಜ್ಯಸಭೆಗೆ ರಾಜಿನಾಮೆ ನೀಡಿದಾಗ ಬಿಜೆಪಿಗೂ ರಾಜಿನಾಮೆ ನೀಡಿದಂತಾಗುತ್ತದೆ ಎಂದು ಸಿಧು ಭಾವಿಸಿದ್ದರು. ಜನರು ಸಾಮಾಜಿಕ ಜಾಲತಾಣಗಳಲ್ಲಿ ಸಿಧುರವರನ್ನು ಬಿಜೆಪಿಯಿಂದ ತೆಗೆದು ಹಾಕಲಾಗಿದೆ ಎಂದು ತಪ್ಪು ಮಾಹಿತಿಯನ್ನು ನೀಡುತ್ತಿದ್ದರು. ಹಾಗಾಗಿ ಔಪಚಾರಿಕವಾಗಿ ಬಿಜೆಪಿಗೆ ರಾಜಿನಾಮೆ ನೀಡುವ ಅಗತ್ಯವಿತ್ತು" ಎಂದು ಸಿಧು ಪತ್ನಿ ನವ್ ಜೋತ್ ಕೌರ್ ಹೇಳಿದ್ದಾರೆ.

ಮುಂದಿನ ವರ್ಷ ಪಂಜಾಬ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಹೀಗಾಗಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈಗಾಗಲೇ ರಾಜ್ಯಸಭಾ ಸ್ಥಾನಕ್ಕೆ ಗುಡ್ ಬೈ ಹೇಳಿ ಆವಾಜ್-ಈ-ಪಂಜಾಬ್ ಪಕ್ಷವನ್ನು ಸ್ಥಾಪಿಸಿ ಚುನಾವಣೆಗೆ ರಣತಂತ್ರ ಹೆಣೆಯುತ್ತಿದ್ದಾರೆ.