ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಕಳೆದ ಮಂಗಳವಾರ ಬೆಂಗಳೂರಿನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಎನ್'ಸಿಸಿ ತಂಡವು ಭಾಗವಹಿಸಿರುವ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಗೆ ಎನ್'ಜಿಓ  ದೂರು ನೀಡಿದೆ.

ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಕಳೆದ ಮಂಗಳವಾರ ಬೆಂಗಳೂರಿನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಎನ್'ಸಿಸಿ ತಂಡವು ಭಾಗವಹಿಸಿರುವ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಗೆ ಎನ್'ಜಿಓ ಒಂದು ನೀಡಿದೆ.

ಸೆ.12ರಂದು ನಡೆದ 'ನಾನೂ ಗೌರಿ' ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಬೆಂಗಳೂರಿನ ಸೆಂಟ್.ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳ ಎನ್'ಸಿಸಿ ತಂಡವು, ಘೋಷಣಾ ಪತ್ರಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆಯಲ್ಲಿ ತನ್ನ ದನಿಯನ್ನು ಸೇರಿಸಿತ್ತು.

ಎನ್'ಸಿಸಿ ಈ ಕ್ರಮದಿಂದ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಹೇಳಿರುವ ಸಿಟಿಜನ್ ಫಾರ್ ಡೆಮಾಕ್ರಸಿ ಸಂಸ್ಥೆಯು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಮಾನವಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ದೂರು ನೀಡಿದೆ.

ಎನ್'ಸಿಸಿ ಕಾಯ್ದೆ 1948ರ ಪ್ರಕಾರ, ಯಾವುದೇ ವಿದ್ಯಾರ್ಥಿಯು ಎನ್'ಸಿಸಿ ಸಮವಸ್ತ್ರವನ್ನು ಧರಿಸಿ ಪ್ರತಿಭಟನೆಗಳು, ರಾಜಕೀಯ ಸಭೆಗಳಲ್ಲಿ ಭಾಗವಹಿಸುವಂತಿಲ್ಲ.

ಆದರೆ ಸೆಂಟ್ರಲ್ ಕಾಲೇಜು ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸೆಂಟ್ ಜೋಸೆಫ್ ಕಾಲೇಜಿನ ಎನ್'ಸಿಸಿ ತಂಡವು ಪ್ರತಿಭಟನಾಕಾರರ ಪರವಾಗಿ ಚಟುವಟಿಕೆಯಿಂದ ಓಡಾಡುತ್ತಾ, ಕರಪತ್ರಗಳನ್ನು, ಘೋಷಣಾ ಪತ್ರಗಳನ್ನು ಪ್ರದರ್ಶಿಸಿದ್ದರು ಎನ್ನಲಾಗಿದೆ.