ರಾಜ್ಯದಲ್ಲಿ ಎನ್‌ಸಿಪಿ ಸ್ಪರ್ಧೆ: ಜೆಡಿಎಸ್‌’ನೊಂದಿಗೆ ಮೈತ್ರಿ?

First Published 15, Feb 2018, 7:46 AM IST
NCP Contest In Karnataka  Election
Highlights

ಮಹಾರಾಷ್ಟ್ರದಲ್ಲಿ ಪ್ರಬಲವಾಗಿರುವ ಅಲ್ಲಿನ ಮಾಜಿ ಮುಖ್ಯಮಂತ್ರಿ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿ (ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ) ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ.

ಬೆಂಗಳೂರು :ಮಹಾರಾಷ್ಟ್ರದಲ್ಲಿ ಪ್ರಬಲವಾಗಿರುವ ಅಲ್ಲಿನ ಮಾಜಿ ಮುಖ್ಯಮಂತ್ರಿ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿ (ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ) ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ.

ಎನ್‌ಸಿಪಿ ಈ ಬಾರಿ ರಾಜ್ಯದ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಹೊಂದಿದ್ದು, ಜೆಡಿಎಸ್‌ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆಯೂ ಚಿಂತನೆ ನಡೆಸಿದೆ. ಆದರೆ, ಹೊಂದಾಣಿಕೆ ಸಾಧ್ಯವಾಗದಿದ್ದರೆ ಏಕಾಂಗಿಯಾಗಿ ಸ್ಪರ್ಧಿಸುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಒಟ್ಟಿನಲ್ಲಿ ಚುನಾವಣೆಯಲ್ಲಿ ಕಣಕ್ಕಿಳಿಯುವ ಬಗ್ಗೆ ಬಹುತೇಕ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ಆಯೋಜಿಸಲಾಗಿದೆ. ಪಕ್ಷದ ಅಧ್ಯಕ್ಷ ಶರದ್‌ ಪವಾರ್‌ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಚುನಾವಣೆ ಸ್ಪರ್ಧೆ ಮತ್ತು ಹೊಂದಾಣಿಕೆ ಬಗ್ಗೆ ಚರ್ಚೆ ನಡೆಯಲಿದೆ. ರಾಜ್ಯದ ಮುಂಬೈ ಕರ್ನಾಟಕ ಭಾಗದಲ್ಲಿ ಎನ್‌ಸಿಪಿಯ ತುಸು ಪ್ರಭಾವ ಕಂಡು ಬರುತ್ತಿದ್ದು, ಆ ಭಾಗದಲ್ಲಿ ಸ್ಪರ್ಧಿಸುವ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ಸಂಗ್ರಹ ಮಾಡಲಿದೆ ಎಂದು ತಿಳಿದು ಬಂದಿದೆ.

loader