ನವದೆಹಲಿ:  ರಾಜ್ಯಸಭೆಯ ಉಪ ಸಭಾಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ)ಯ ವಂದನಾ ಚವಾಣ್‌ರನ್ನು ಆಯ್ಕೆ ಮಾಡಲಾಗಿದೆ. 

ವಂದನಾರನ್ನು ಗೆಲ್ಲಿಸುವು ದಕ್ಕಾಗಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಬಿಜೆಡಿಯ ನವೀನ್ ಪಟ್ನಾಯಕ್ ಮತ್ತು ಶಿವಸೇನೆ ಬೆಂಬಲ ಪಡೆಯಲು ಮುಂದಾಗಿದ್ದಾರೆ. 

ಮುಂಬೈ ಉಗ್ರ ದಾಳಿಯಲ್ಲಿ ಮಡಿದ ಅಶೋಕ್ ಕಾಮ್ಟೆ ಪತ್ನಿ ವಿನಿತಾ ಕಾಮ್ಟೆಯವರ ಸಹೋದರಿ ವಂದನಾ ಕಾಮ್ಟೆ. ಮತ್ತೊಂದೆಡೆ ಎನ್‌ಡಿಎ ಮೈತ್ರಿಕೂಟದಲ್ಲಿ ಜೆಡಿಯು ಸಂಸದ ಹರಿವಂಶ ನಾರಾಯಣ್ ಸಿಂಗ್ ರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.