ಕಲಾಪ ವ್ಯರ್ಥ: 23 ದಿನದ ವೇತನ ತ್ಯಜಿಸಿದ ಎನ್‌ಡಿಎ ಸಂಸದರು

NDA MPs to give up Salary for Disrupted part of Budget session
Highlights

ಕಾಂಗ್ರೆಸ್‌ ಮತ್ತು ಪ್ರತಿಪಕ್ಷಗಳ ಗದ್ದಲದಿಂದಾಗಿ ಸಂಸತ್ತಿನ ಬಜೆಟ್‌ ಅಧಿವೇಶನ ನಡೆಯದೇ ಇರುವ ಹಿನ್ನೆಲೆಯಲ್ಲಿ ಎನ್‌ಡಿಎ ಆಡಳಿತದ ಸಂಸದರು 23 ದಿನಗಳ ವೇತನವನ್ನು ತ್ಯಜಿಸಲಿದ್ದಾರೆ ಎಂದು ಕೇಂದ್ರ ಸಚಿವ ಅನಂತ್‌ ಕುಮಾರ್‌ ಬುಧವಾರ ತಿಳಿಸಿದ್ದಾರೆ.

ನವದೆಹಲಿ: ಕಾಂಗ್ರೆಸ್‌ ಮತ್ತು ಪ್ರತಿಪಕ್ಷಗಳ ಗದ್ದಲದಿಂದಾಗಿ ಸಂಸತ್ತಿನ ಬಜೆಟ್‌ ಅಧಿವೇಶನ ನಡೆಯದೇ ಇರುವ ಹಿನ್ನೆಲೆಯಲ್ಲಿ ಎನ್‌ಡಿಎ ಆಡಳಿತದ ಸಂಸದರು 23 ದಿನಗಳ ವೇತನವನ್ನು ತ್ಯಜಿಸಲಿದ್ದಾರೆ ಎಂದು ಕೇಂದ್ರ ಸಚಿವ ಅನಂತ್‌ ಕುಮಾರ್‌ ಬುಧವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್ತಿನ ಕಲಾಪ ವ್ಯರ್ಥವಾಗುವುದಕ್ಕೆ ಕಾಂಗ್ರೆಸ್‌ ಪಕ್ಷವೇ ಕಾರಣ ಎಂದು ಆರೋಪಿಸಿದರು. ವಿರೋಧ ಪಕ್ಷಗಳು ಮಸೂದೆಗಳು ಮಂಡನೆ ಆಗುವುದನ್ನು ತಡೆ ಹಿಡಿದಿವೆ.

ಕಾಂಗ್ರೆಸ್‌ ಮತ್ತು ಇತರ ಪಕ್ಷಗಳ ಪ್ರತಿಭಟನೆಯಿಂದಾಗಿ ಜನರ ತೆರಿಗೆ ಹಣ ಪೋಲಾಗಿದೆ. ಈ ವಿಷಯವಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಚರ್ಚಿಸಿದ್ದು, ಎನ್‌ಡಿಎ ಸಂಸದರು 23 ದಿನಗಳ ವೇತನವನ್ನು ತ್ಯಜಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

loader