ಗೋರಕ್ಷಣೆಯು ಸಂವಿಧಾನದ ಅವಿಭಾಜ್ಯ ಅಂಗವಾಗಿದೆ, ಆದರೆ ಕೆಲವು ದುಷ್ಟಶಕ್ತಿಗಳು ಗೋರಕ್ಷಕರನ್ನು ಕೆಟ್ಟದಾಗಿ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಭಾಗವತ್

ನಾಗಪುರ (ಅ.11): ನಕಲಿ ಗೋರಕ್ಷಕರ ನಡುವೆ ಅಸಲಿ ಗೋರಕ್ಷಕರನ್ನು ಗುರುತಿಸುವ ಅಗತ್ಯವಿದೆಯೆಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಗೋರಕ್ಷಣೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ನೀಡಿದ್ದ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದ ಧಾಟಿಯಲ್ಲಿ ಮಾತನಾಡಿದ ಮೋಹನ್ ಭಾಗವತ್, ಗೋರಕ್ಷಕರು ಕಾನೂನಿನ ಪರಿಮಿತಿಯೊಳಗೆ ಕಾರ್ಯಾಚರಿಸಬೇಕು ಎಂದು ಕರೆ ನೀಡಿದ್ದಾರೆ.

ವಿಜಯದಶಮಿ ಸಂದರ್ಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಭಾಗವತ್, ಗೋರಕ್ಷಣೆಯು ಸಂವಿಧಾನದ ಅವಿಭಾಜ್ಯ ಅಂಗವಾಗಿದೆ, ಆದರೆ ಕೆಲವು ದುಷ್ಟಶಕ್ತಿಗಳು ಗೋರಕ್ಷಕರನ್ನು ಕೆಟ್ಟದಾಗಿ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಂತಹ ದುಷ್ಟಶಕ್ತಿಗಳ ವಿರುದ್ಧ ನಾವು ಎಚ್ಚರದಿಂದಿರಬೇಕು; ಅವುಗಳು ಲಾಭ ಪಡೆಯದಂತಾಗಲು ನಾವು ಸಮಾಜವನ್ನು ಒಗ್ಗೂಡಿಸಬೇಕು, ಎಂದು ಅವರು ಕರೆ ನೀಡಿದ್ದಾರೆ.