ಸೇವಾ ಜೇಷ್ಠತೆ ಹೊಂದಿರುವ ಐಪಿಎಸ್ ಅಧಿಕಾರಿ ನೀಲಮಣಿ ಕರ್ನಾಟಕ ರಾಜ್ಯದ ನೂತನ ಡಿಜಿ-ಐಜಿಪಿಯಾಗಿ ಆಯ್ಕೆಯಾಗಿದ್ದಾರೆ. ನೂತನ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಮೂವರು ಹಿರಿಯ ಅಧಿಕಾರಿಗಳ ಮಧ್ಯೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಕೊನೆಗೂ ಮಹಿಳಾ ಅಧಿಕಾರಿಯೊಬ್ಬರು ಡಿಜಿ-ಐಜಿಪಿಯಾಗಿ ಆಯ್ಕೆಯಾಗಿದ್ದಾರೆ. ಅಲ್ಲದೇ ಇವರು ಕರ್ನಾಟಕ ರಾಜ್ಯದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರು(ಅ.31): ಸೇವಾ ಜೇಷ್ಠತೆ ಹೊಂದಿರುವ ಐಪಿಎಸ್ ಅಧಿಕಾರಿ ನೀಲಮಣಿ ಕರ್ನಾಟಕ ರಾಜ್ಯದ ನೂತನ ಡಿಜಿ-ಐಜಿಪಿಯಾಗಿ ಆಯ್ಕೆಯಾಗಿದ್ದಾರೆ.
ನೂತನ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಮೂವರು ಹಿರಿಯ ಅಧಿಕಾರಿಗಳ ಮಧ್ಯೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಕೊನೆಗೂ ಮಹಿಳಾ ಅಧಿಕಾರಿಯೊಬ್ಬರು ಡಿಜಿ-ಐಜಿಪಿಯಾಗಿ ಆಯ್ಕೆಯಾಗಿದ್ದಾರೆ. ಅಲ್ಲದೇ ಇವರು ಕರ್ನಾಟಕ ರಾಜ್ಯದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಈಗಾಗಲೇ ಕರ್ನಾಟಕದ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿರುವ ನೀಲಮಣಿ ಎನ್.ರಾಜು 1983ರ ಬ್ಯಾಚ್'ನ ಐಪಿಎಸ್ ಅಧಿಕಾರಿಯಾಗಿದ್ದು, ಉತ್ತರ ಪ್ರದೇಶದ ರೂರ್ಕಿ ಮೂಲದವರು. ಇವರು M.A, M.B.A. M.Phil ಪದವಿ ಪಡೆದಿದ್ದಾರೆ.
