ಇನ್ಮುಂದೆ ಆಯುರ್ವೇದ, ಯೋಗ, ನ್ಯಾಚುರೋಪತಿ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿ ವೈದ್ಯಕೀಯ ಕೋರ್ಸ್‌ ಮಾಡಲು ಬಯಸುವವರು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌)ಯಲ್ಲಿ ತೇರ್ಗಡೆ ಹೊಂದುವುದು ಕಡ್ಡಾಯ

ನವದೆಹಲಿ: ಮುಂದಿನ ವರ್ಷ(2018)ದಿಂದ ಆಯುಷ್‌ (ಆಯುರ್ವೇದ, ಯೋಗ, ನ್ಯಾಚುರೋಪತಿ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿ) ವೈದ್ಯಕೀಯ ಕೋರ್ಸ್‌ ಮಾಡಲು ಬಯಸುವವರು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌)ಯಲ್ಲಿ ತೇರ್ಗಡೆ ಹೊಂದುವುದು ಕಡ್ಡಾಯವಾಗಲಿದೆ.

ಪ್ರವೇಶಾತಿ ನಿಯಮಗಳ ಗುಣಮಟ್ಟಸುಧಾರಿಸುವುದು ಮತ್ತು ಪ್ರತಿ ಭಾವಂತ ವಿದ್ಯಾರ್ಥಿಗಳನ್ನು ಸೆಳೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.