ಬೆಂಗಳೂರು(ಫೆ.20): ಪೌರತ್ವ ಕಾಯ್ದಿ ಹಾಗೂ NRC ವಿರೋಧಿಸಿ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ದೇಶ ದ್ರೋಹದ ಕೂಗು ಭಾರಿ ವಿವಾದ ಸೃಷ್ಟಿಸಿದೆ. HMSI ಸಂಘಟನೆ ಆಯೋಜಿಸಿದ ಪ್ರತಿಭಟನೆಯಲ್ಲಿ ಕೊಪ್ಪ ಮೂಲದ ಅಮೂಲ್ಯ ಲಿಯೋನ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗೋ ಮೂಲಕ ದೇಶದ್ರೋಹದ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಅರೆಸ್ಟ್

ಕೇಂದ್ರ ಜಾರಿಗೆ ತಂದ CAA  ಹಾಗೂ NRC ವಿರೋಧಿಸಿ ನಡೆದ ಪ್ರತಿಭಟನಾ ಸಮಾವೇಶಕ್ಕೆ ಸಂಸದ ಅಸಾದುದ್ದೀನ್ ಓವೈಸಿ ಮುಖ್ಯ ಅತಿಥಿಯಾಗಿದ್ದರು. ಈ ಕಾರ್ಯಕ್ರಮದ ಅಂತ್ಯದಲ್ಲಿಎಡಪಂಥಿಯ ಅಮೂಲ್ಯ ಪಾಕಿಸ್ತಾನ ಜಿಂದಾಬಾದ್ ಎಂದು ಎರಡೆರಡು ಬಾರಿ ಕೂಗಿದ್ದಾರೆ. ಅಮೂಲ್ಯ ಹಾಗೂ ಆಯೋಜಕರ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ. ದೇಶದ್ರೋಹಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಿ ಎಂದು ಆಗ್ರಹಿಸಿದ್ದಾರೆ.