ಬೆಂಗಳೂರು [ಜು.2] :  ಲಿಂಗನಮಕ್ಕಿ ಜಲಾಶಯದಿಂದ ರಾಜಧಾನಿ ಬೆಂಗಳೂರಿಗೆ ನೀರು ತರುವ ಯೋಜನೆ ಜಾರಿಗೆ ಬಿಡುವುದಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. 

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ತರಲು ಮುಂದಾಗಿರುವ ಸರ್ಕಾರ ಕ್ರಮವು ಅವೈಜ್ಞಾನಿಕವಾದುದು. ಅದು ಕಾರ್ಯಸಾಧುವಲ್ಲ ಎಂದು ಹರಿಹಾಯ್ದರು. 

ಯಾವುದೇ ಕಾರಣಕ್ಕೂ ಈ ಯೋಜನೆ ಜಾರಿಯಾಗಲು ಅವಕಾಶ ನೀಡುವುದಿಲ್ಲ. ಈ ಯೋಜನೆಯ ಬದಲು ಪರ್ಯಾಯ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.