ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ ಸಂಬಂಧ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಹಾಗೂ ರಾಜ್ಯ ಸರ್ಕಾರದ ಮಧ್ಯ ಮಾತುಕತೆ ನಡೆದಿದೆ. ವಿಮಾನ ನಿಲ್ದಾಣದ ವಿಸ್ತರಣೆ ಮತ್ತು ಮೇಲ್ದರ್ಜೆಗೆ ಏರಿಸಲು ರಾಜ್ಯ ಸರ್ಕಾರ ಯಾವ ರೀತಿ ಸಹಾಯ ನೀಡಬಹುದು ಎಂಬ ಬಗ್ಗೆ ವಿವರ ನೀಡುವಂತೆ ಪ್ರಾಧಿಕಾರದ ಅಧ್ಯಕ್ಷರು ಕೋರಿದ್ದಾರೆ ಎಂದು ದೇಶಪಾಂಡೆ ಹೇಳಿದರು.

ವಿಧಾನಪರಿಷತ್: ಮಂಗಳೂರು ಮತ್ತು ಉಡುಪಿ ನಡುವೆ ನೂತನ ಪರ್ಯಾಯ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಸ್ಥಳ ಪರಿಶೀಲನೆ ಮತ್ತು ಯೋಜನೆಯ ಸಾಧ್ಯಾ ಸಾಧ್ಯತೆ ಕುರಿತು ಅಧ್ಯಯನ ನಡೆಯಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಆರ್‌.ವಿ. ದೇಶಪಾಂಡೆ ತಿಳಿಸಿದ್ದಾರೆ.

ಶುಕ್ರವಾರ ಬಿಜೆಪಿಯ ಗಣೇಶ್‌ ಕಾರ್ಣಿಕ್‌ ಅವರ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು. ಈಗಾಗಲೇ ಇರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಸ್ತರಣೆ ಖರ್ಚು ಭರಿಸುವ ಬಗ್ಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಯಾವುದೇ ಖಚಿತ ಭರವಸೆ ನೀಡಿಲ್ಲ. ಅಲ್ಲದೆ ಐಸೆಕ್‌ ಎಂಬ ಖಾಸಗಿ ಸಂಸ್ಥೆ ಈ ಕುರಿತು ಅಧ್ಯಯನ ನಡೆಸಿ ನೀಡಿದ ವರದಿಯಲ್ಲಿ ಖಾಸಗಿ-ಸರ್ಕಾರಿ ಸಹಭಾಗಿತ್ವ ದಲ್ಲಿ ಪಿಪಿಪಿ ಮಾದರಿಯಲ್ಲಿ ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ ಕಾರ್ಯ ಸಾಧ್ಯವಿಲ್ಲವೆಂದು ಹೇಳಿದೆ ಎಂದು ಸಚಿವ ಆರ್‌.ವಿ.ದೇಶಪಾಂಡೆ ಸದನಕ್ಕೆ ತಿಳಿಸಿ ದರು. ಈ ಹಿನ್ನೆಲೆಯಲ್ಲಿ ಪರ್ಯಾಯ ವಿಮಾನ ನಿಲ್ದಾ ಣದ ನಿರ್ಮಾಣಕ್ಕೆ ಸರ್ಕಾರ ಸಾಧ್ಯಾ ಸಾಧ್ಯತೆ ಅಧ್ಯಯನ ನಡೆಸಲಿದೆ ಎನ್ನಲಾಗುತ್ತಿದೆ.

ವಿಸ್ತರಣೆ ಮಾತುಕತೆ: ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ ಸಂಬಂಧ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಹಾಗೂ ರಾಜ್ಯ ಸರ್ಕಾರದ ಮಧ್ಯ ಮಾತುಕತೆ ನಡೆದಿದೆ. ವಿಮಾನ ನಿಲ್ದಾಣದ ವಿಸ್ತರಣೆ ಮತ್ತು ಮೇಲ್ದರ್ಜೆಗೆ ಏರಿಸಲು ರಾಜ್ಯ ಸರ್ಕಾರ ಯಾವ ರೀತಿ ಸಹಾಯ ನೀಡಬಹುದು ಎಂಬ ಬಗ್ಗೆ ವಿವರ ನೀಡುವಂತೆ ಪ್ರಾಧಿಕಾರದ ಅಧ್ಯಕ್ಷರು ಕೋರಿದ್ದಾರೆ ಎಂದು ದೇಶಪಾಂಡೆ ಹೇಳಿದರು.

ಕನ್ನಡಪ್ರಭ ವಾರ್ತೆ
epaper.kannadaprabha.in