ಘಟನೆ ಬಗ್ಗೆ ಸ್ಥಳೀಯರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು ಆಸ್ಪತ್ರೆ ಸಿಬ್ಬಂದಿ ಮೇಲೆ ಸಂಶಯ ವ್ಯಕ್ತವಾಗಿದೆ.

ಚಿಕ್ಕಬಳ್ಳಾಪುರ(ಡಿ.28): ಇಲ್ಲಿನ ಹೊಸ ಸರಕಾರಿ ಆಸ್ಪತ್ರೆ ಮುಂಭಾಗದ ಬಳಿ ಬಿಸಾಡಿದ್ದ ನವಜಾತಶಿಶುವನ್ನು ನಾಯಿಗಳು ಕಚ್ಚಿ ಸಾಹಿಸಿದ ಹೃದಯ ವಿದ್ರಾವಕ ಘಟನೆ ಪಟ್ಟಣದಲ್ಲಿ ನಡೆದಿದೆ.
ಮೃತ ಶಿಶುವನ್ನು ಕಂಡ ಸ್ಥಳೀಯರು ಆಸ್ಪತ್ರೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರ ಸಹಾಯದಿಂದ ಮಗುವನ್ನು ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ಘಟನೆ ಬಗ್ಗೆ ಸ್ಥಳೀಯರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು ಆಸ್ಪತ್ರೆ ಸಿಬ್ಬಂದಿ ಮೇಲೆ ಸಂಶಯ ವ್ಯಕ್ತವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಸ್ಪತ್ರೆಯಲ್ಲಿ ಮಕ್ಕಳ ಮಾರಾಟ ದಂಧೆ

ಆಸ್ಪತ್ರೆಯಲ್ಲಿ ಮಕ್ಕಳ ಮಾರಾಟ ದಂಧೆ ನಡೆಯುತ್ತಿದ್ದು ಈ ಕಾರಣಕ್ಕೆ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ನಾಯಿಗಳ ಬಾಯಿಗೆ ಮಗು ಆಹಾರವಾಗಿದೆ ಎಂದು ಕರವೇ ಸಂಘಟನೆ ಆಸ್ಪತ್ರೆ ಎದುರು ಆಕ್ರೋಶ ವ್ಯಕ್ತಪಡಿಸಿ ಆರೋಗ್ಯಾಧಿಕಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕರು ಸ್ಥಳಕ್ಕೆ ಬರಬೇಕೆಂದು ಒತ್ತಾಯಿಸಿದರು.